ಬಿಜೆಪಿ ಪರ ಪ್ರಧಾನಿ ನರೇಂದ್ರ ಮೋದಿ ಪ್ರಚಾರ

2 years ago

ಬೆಂಗಳೂರು: ಲೋಕಸಭೆ ಚುನಾವಣೆ ಪ್ರಚಾರದ ಅಖಾಡಕ್ಕೆ ಭರ್ಜರಿ ರಂಗು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರದ ರಂಗ ಪ್ರವೇಶ ಮಾಡಿದ್ದು ಇಂದು ಮೈಸೂರು ಮತ್ತು ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.

ಸಿಎಂ ಸಿದ್ದರಾಮಯ್ಯ ತವರು ಮೈಸೂರಿನಲ್ಲಿ ಬೃಹತ್ ಸಮಾವೇಶ ಆಯೋಜಿಸಿದ್ದು, ಇದರಲ್ಲಿ ಮೈಸೂರು ಹಾಸನ ಮಂಡ್ಯ ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದು, ಇವರೊಂದಿಗೆ ಜೆಡಿಎಸ್ ನಾಯಕರಾದ ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ.

ಜೆಡಿಎಸ್ ನ ಭದ್ರಕೋಟೆಯಾಗಿರುವ ಹಳೆ ಮೈಸೂರು ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೆಡಿಎಸ್ ಮುಖಂಡರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೂಲಕ ಬಿಜೆಪಿ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದಾರೆ.

ಮೈಸೂರಿನ ಸಾರ್ವಜನಿಕ ಸಭೆಯ ನಂತರ ಅವರು ಕಡಲ ತಡಿ ಮಂಗಳೂರಿಗೆ ಲಗ್ಗೆ ಇಡುತ್ತಿದ್ದಾರೆ. ಮಂಗಳೂರಿನ ಪ್ರಮುಖ ಬೀದಿಗಳಲ್ಲಿ ಸುಮಾರು ಮೂರು ಕಿಲೋ ಮೀಟರ್ ರೋಡ್ ಶೋ ನಡೆಸುವ ಮೂಲಕ ನರೇಂದ್ರ ಮೋದಿ ಅವರು ಮಂಗಳೂರು ಮತ್ತು ಉಡುಪಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತಯಾಚಿಸಲಿದ್ದಾರೆ.

Leave a Reply