ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ದಯಾನಂದ ನಗರ ವಾರ್ಡ್ ನಲ್ಲಿ ಕಾರ್ಮಿಕ ಇಲಾಖೆ ಮತ್ತು ಡಾ||ಅಂಬೇಡ್ಕರ್ ಕಟ್ಟಡ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕ ಸಂಘದ ವತಿಯಿಂದ ಲೇಬರ್ ಕಾರ್ಡ್ ಮತ್ತು ಇ-ಶ್ರಾಮ್ ಕಾರ್ಡ್ ನೋಂದಣಿ ಹಾಗೂ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಕಟ್ಟಡ ಕಾರ್ಮಿಕರ ಕಿಟ್,ಪ್ಲಂಬರ್ ಕಿಟ್, ಪೈಂಟರ್ ಕಿಟ್, ಎಲೆಕ್ಟ್ರಿಷಿಯನ್ ಕಿಟ್ ಹಾಗೂ ವಿದ್ಯಾಭ್ಯಾಸಕ್ಕೆ ಅನುಕೂಲಕ್ಕೆ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.
ಮಾಜಿ ಶಿಕ್ಷಣ ಸಚಿವ, ಶಾಸಕ ಎಸ್.ಸುರೇಶ್ ಕುಮಾರ್ ಮತ್ತು ಮಾಜಿ ಬಿಬಿಎಂಪಿ ಸದಸ್ಯರಾದ ಎಂ.ಮುನಿರಾಜು, ಶಕೀಲ ಮುನಿರಾಜು, ರಾಜಾಜಿನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಸಂಜಯ್ ಸಂವಿಧಾನ ಶಿಲ್ಪಿ ಡಾ||ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಣೆ ಮಾಡಿದರು.
ಎಸ್.ಸುರೇಶ್ ಕುಮಾರ್ ಮಾತನಾಡಿ, ರೈತ, ಸೈನಿಕ ಮತ್ತು ಕಾರ್ಮಿಕರು ಈ ದೇಶದ ಜೀವನಾಡಿ. ಸೈನಿಕ ದೇಶ ಕಾಯುತ್ತಾನೆ, ರೈತ ಭೂಮಿಯಲ್ಲಿ ಬೆಳೆ ಬೆಳದು ಎಲ್ಲರ ಹಸಿವು ನೀಗಿಸುತ್ತಾನೆ. ಕಾರ್ಮಿಕ ದೇಶದ ಅಭಿವೃದ್ದಿಗಾಗಿ ಶ್ರಮವಹಿಸುತ್ತಾನೆ ಎಂದರು.
ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಮಿಕರ ಹೆಚ್ಚು ವಾಸಿಸುವ ಕ್ಷೇತ್ರವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಯೋಜನೆಗಳು ಕಾರ್ಮಿಕರಿಗೆ ಸಮರ್ಪಕವಾಗಿ ತಲುಪಿಸವಲ್ಲಿ ಕಾರ್ಮಿಕರ ಆದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಪ್ರಧಾನಿ ನರೇಂದ್ರಮೋದಿರವರು ನಿಮ್ಮ ಸಹಾಯ ಯಾರು ಇಲ್ಲ ಎಂದು ತಿಳಿಯಬೇಡಿ ನಿಮ್ಮ ಕುಟುಂಬದ ಜೊತೆಯಲ್ಲಿ ನಾನು ಇದ್ದೇನೆ ಎಂದು ದೇಶದ ಜನರಿಗೆ ಆತ್ಮವಿಶ್ವಾಸ ತುಂಬಿದ್ದಾರೆ ಎಂದರು.
ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಏಳು ವಾರ್ಡ್ ಗಳಲ್ಲಿ ಕಳೆದ ಎಂಟು ತಿಂಗಳಿಂದ 13,850 ಮನೆಗಳಿಗೆ ಭೇಟಿ ನೀಡಿದ್ದೇನೆ. ಮನೆ, ಮನೆ ಭೇಟಿಯಿಂದ ಜನರ ಸಮಸ್ಯೆ ಆಲಿಸಲು ಮತ್ತು ಹಾಗೂ ರಾಜ್ಯ ಸರ್ಕಾರ ವಿವಿಧ ಯೋಜನೆಗಳ ಅರ್ಹ ಫಲಾನುಭವಿಗಳನ್ನು ಗುರುತಿಸಲು ಸಹಕಾರಿಯಾಗಿದೆ ಎಂದರು.
ಬಿಜೆಪಿ ಮುಖಂಡರಾದ ಸುದರ್ಶನ್, ಗುರುಮೂರ್ತಿ ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.



