ಹುಬ್ಬಳ್ಳಿ: ಕರ್ನಾಟಕದಲ್ಲಿ ಅಬಕಾರಿ ಇಲಾಖೆಯ 700 ಕೋಟಿ ಹಣ ತಂದು ಮಹರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಪ್ರಧಾನಿ Narendra Modi ಅವರ ಹೇಳಿಕೆ ಅವರ ಸ್ಥಾನಕ್ಕೆ ಅಗೌರವ ತರುವಂತದ್ದು ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ₹700 ಕೋಟಿ ಎಲ್ಲಿರತ್ತೆ. ಯಾರು ಕೊಡ್ತಾರೆ? ಪ್ರಧಾನಿ ಆದವರಿಗೆ ಈ ಮಟ್ಟದ ಅಜ್ಞಾನ ಇರಬಾರದು. ಮೋದಿಯವರು ಸುಳ್ಳು ಹೇಳೋದು ಹೊಸ ವಿಷಯ ಏನಲ್ಲ. ಆದರೆ ಈ ಮಟ್ಟದ ಸುಳ್ಳು ನಿರೀಕ್ಷೆ ಮಾಡಿರಲಿಲ್ಲ ಎಂದರು.
30 ವರ್ಷಗಳ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಮ್ಮ ಕೊಲೆಗೆ ಯತ್ನ ನಡೆದಿತ್ತು ಎಂದು ಯಡಿಯೂರಪ್ಪ ಅವರು ಈಗ ಹೇಳುತ್ತಿದ್ದಾರೆ. ಆಗ ಏಕೆ ದೂರು ಕೊಡಲಿಲ್ಲ? ಕೇಸು ಹಾಕಿಸಲಿಲ್ಲ? ಚುನಾವಣೆ ಬಂದಾಗ ಇಂಥ ಹೇಳಿಕೆ ನೀಡಿದರೆ ಅದರಿಂದ ರಾಜಕೀಯ ಲಾಭ ಆಗುತ್ತೆ ಎನ್ನುವುದು ಅವರ ಲೆಕ್ಕಾಚಾರ ಇರಬಹುದು ಎಂದರು.




