ಬೆಂಗಳೂರು: ಕಬ್ಬು ಬೆಳೆಗಾರರ ಪ್ರತಿಭಟನೆಗೆ ಮಣಿದಿರುವ ರಾಜ್ಯ ಸರ್ಕಾರ, ಒತ್ತಡಕ್ಕೆ ಮಣಿದು ಕಬ್ಬಿಗೆ ಅವೈಜ್ಞಾನಿಕ ಬೆಲೆ ನಿಗದಿಪಡಿಸಿ ಆದೇಶ ಹೊರಡಿಸಿದೆ ಎಂದು ಸಕ್ಕರೆ ಕಾರ್ಖಾನೆ ಮಾಲೀಕರು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ರದ್ದುಪಡಿಸುವಂತೆ ಕೋರಿ ಹಲವು ಖಾಸಗಿ ಸಕ್ಕರೆ ಕಾರ್ಖಾನೆಗಳು ಹೈಕೋರ್ಟ್ ಮೊರೆ ಹೊಕ್ಕಿವೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ರೇಣುಕಾ ಶುಗರ್ಸ್, ನಿರಾಣಿ ಶುಗರ್ಸ್, ಜೆಮ್ ಶುಗರ್ಸ್, ಕೆಪಿಆರ್ ಶುಗರ್ಸ್, ಗೋದಾವರಿ ಬಯೋ ರಿಫೈನರೀಸ್ ಈ ಬಗ್ಗೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದವು.
ರಾಜ್ಯ ಸರ್ಕಾರ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ 3250 ರೂ. ದರ ನಿಗದಿ ಮಾಡಿದೆ. ಕಟಾವು, ಸಾಗಾಣಿಕೆ ಸೇರಿದರೆ ಕಾರ್ಖಾನೆಗಳಿಗೆ 4,150 ರೂ. ವೆಚ್ಚವಾಗಲಿದ್ದು, ಕಾನೂನು ಪಾಲಿಸದೇ ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಆದೇಶ ನೀಡಿದೆ. ಇದರಿಂದ ಸಕ್ಕರೆ ಕಾರ್ಖಾನೆಗಳಿಗೆ ಭರಿಸಲಾಗದ ನಷ್ಟ ಉಂಟಾಗಲಿದೆ. ಹೀಗಾಗಿ ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿವೆ.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದರು. ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಇತರೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಡಿಸೆಂಬರ್ 17ಕ್ಕೆ ವಿಚಾರಣೆ ಮುಂದೂಡಿದರು.




