ಸೆ.11ರಂದು ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್

3 years ago

Private transport bandh in Bangalore on September 11

ಬೆಂಗಳೂರು: ಅಕ್ರಮವಾಗಿ ಚಲಿಸುತ್ತಿರುವ ರ್ಯಾಪಿಡೊ ಬೈಕ್ಟ್ಯಾಕ್ಸಿಗಳನ್ನು ನಿಷೇಧಿಸಬೇಕು. ಎಲೆಕ್ಟ್ರಿಕ್ ಆಟೊರಿಕ್ಷಾಗಳಿಗೆ ರಹದಾರಿ ನೀಡಬೇಕು ಎಂಬುದು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಸೆಪ್ಟೆಂಬರ್ 11ರಂದು ಬೆಂಗಳೂರಿನಲ್ಲಿ ಸಾರಿಗೆ ಬಂದ್ ಮಾಡಲು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ನಿರ್ಧರಿಸಿದೆ.

ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಗಳ ಬಸ್ ನಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿರುವ ಶಕ್ತಿ ಯೋಜನೆ ವಿರೋಧಿಸಿ ಕಳೆದ ಜುಲೈ 27ರಂದು ಬಂದ್ ನಡೆಸಲು ಕರೆ ನೀಡಲಾಗಿತ್ತು. ಈ ವೇಳೆ ಸಾರಿಗೆ ಮಂತ್ರಿಗಳು ಸಭೆ ಕರೆದಿದ್ದರು, ಸಭೆಯಲ್ಲಿ ಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸಬೇಕು. ಇಲ್ಲವೇ ರಸ್ತೆ ತೆರಿಗೆಯನ್ನು ಸಂಪೂರ್ಣ ರದ್ದು ಮಾಡಬೇಕು ಎಂಬ ಬೇಡಿಕೆಯೂ ಸೇರಿದಂತೆ 30 ಬೇಡಿಕೆಗಳನ್ನು ಮುಂದಿಟ್ಟಿದ್ದೆವು ಸಾರಿಗೆ ಬಂದ್ ಮಾಡಲಾಗುವುದು ಎಂದು ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಎಸ್. ನಟರಾಜ್ ಶರ್ಮ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಬೇಡಿಕೆಗಳ ಪೈಕಿ 28 ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸಾರಿಗೆ ಸಚಿವರು ಭರವಸೆ ನೀಡಿದ್ದರು. ಹಾಗಾಗಿ ಬಂದ್ ಕರೆ ವಾಪಸ್ ಪಡೆಯಲಾಗಿತ್ತು. ಆದರೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಇಲ್ಲಿಯವರೆಗೆ ಬೇಡಿಕೆ ಈಡೇರಿಸಿಲ್ಲ. ನಮಗೆ ದ್ರೋಹ ಬಗೆದಿದ್ದಾರೆ. ಅದನ್ನು ಖಂಡಿಸಿ, ನಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿ ಸೆ.11ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಆಟೊ, ಟ್ಯಾಕ್ಸಿ, ಏರ್ಪೋರ್ಟ್ ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್, ಕಾರ್ಪೊರೇಟ್ ವಾಹನಗಳು, ಸ್ಕೂಲ್ ಬಸ್, ಫ್ಯಾಕ್ಟ್ರಿ ಬಸ್, ಸ್ಟೇಜ್ ಕ್ಯಾರೇಜ್ ಬಸ್ ಚಾಲಕರ ಸಂಘಗಳು ಸೇರಿದಂತೆ 32 ಸಂಘಟನೆಗಳು ಸೇರಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. 10ರ ರಾತ್ರಿ 12ರಿಂದ ಸೆ.11ರ ರಾತ್ರಿ 12ರವರೆಗೆ ಮುಷ್ಕರ ಇರಲಿದೆ ಎಂದು ಮಾಹಿತಿ ನೀಡಿದರು.

Leave a Reply