ಉಚಿತ ವಿದ್ಯುತ್ ನೀಡಿದರೆ ಎಸ್ಕಾಂಗಳ ಖಾಸಗೀಕರಣ: ಸುನಿಲ್ ಕುಮಾರ್

3 years ago

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತ ಹೇಳಿಕೆಯಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಇದರ ಹಿಂದಿರುವ ಉದ್ದೇಶ ಏನು ಗೊತ್ತೆ ? ಎಸ್ಕಾಂಗಳನ್ನು ಖಾಸಗೀಕರಣ ಮಾಡುವುದೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಅಂತಿಮ ಗುರಿ‌. ಉಚಿತ ವಿದ್ಯುತ್ ನಿಂದ ಎಸ್ಕಾಂಗಳ ಮೇಲೆ ಇನ್ನಷ್ಟು ಹೊರೆಯಾಗುತ್ತದೆ. ಆಗ ನಷ್ಟದಲ್ಲಿರುವ ಎಸ್ಕಾಂಗಳನ್ನು ಖಾಸಗೀಕರಣ ಮಾಡುವ ಸಂಚು ಈ ಘೋಷಣೆಯ ಹಿಂದೆ ಇದೆ ಎಂದು ಆರೋಪಿಸಿದ್ದಾರೆ.

https://youtu.be/TvnBS30j-Yk

ತಾವು ಮುಖ್ಯಮಂತ್ರಿಯಾಗಿದ್ದಾಗ ಕತ್ತಲೆಯಲ್ಲಿ ಬಜೆಟ್ ಓದಿದ್ದನ್ನು ಸಿದ್ದರಾಮಯ್ಯ ಮರೆತಿರಬೇಕು. ನಿಮ್ಮ ಕಾಲದಲ್ಲಿ‌ ಇಂಧನ ಇಲಾಖೆ ಹೇಗೆ ಕಾರ್ಯ ನಡೆಸಿತ್ತು ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ. ನೀವು ಎಸ್ಕಾಂಗಳನ್ನು ನಷ್ಟಕ್ಕೆ ದೂಡಿದ್ದಿರಿ ಎಂದು ಟೀಕಿಸಿದ್ದಾರೆ

ಎಸ್ಕಾಂಗಳನ್ನು ಖಾಸಗಿಕರಣ ಮಾಡುವುದೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಅಂತಿಮ ಗುರಿ‌. ಉಚಿತ ವಿದ್ಯುತ್ ನಿಂದ ಎಸ್ಕಾಂಗಳ ಮೇಲೆ ಇನ್ನಷ್ಟು ಹೊರೆಯಾಗುತ್ತದೆ. ಆಗ ನಷ್ಟದಲ್ಲಿರುವ ಎಸ್ಕಾಂಗಳನ್ನು ಖಾಸಗೀಕರಣ ಮಾಡುವ ಸಂಚು ಈ ಘೋಷಣೆಯ ಹಿಂದೆ ಇದೆ. ತಾವು ಮುಖ್ಯಮಂತ್ರಿಯಾಗಿದ್ದಾಗ ಕತ್ತಲೆಯಲ್ಲಿ ಬಜೆಟ್ ಓದಿದ್ದನ್ನು ಸಿದ್ದರಾಮಯ್ಯ ಮರೆತಿರಬೇಕು. ನೀವು ಅಧಿಕಾರದಲ್ಲಿದ್ದಾಗ ಎಸ್ಕಾಂಗಳನ್ನು ನಷ್ಟಕ್ಕೆ ದೂಡಿದ್ದಿರಿ. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ೯೦೦೦ ಕೋಟಿ ರೂ.ನ್ನು ಎಸ್ಕಾಂಗಳಿಗೆ ನೀಡಿ ನೀವು ಮಾಡಿದ್ದ ಆಡಳಿತ ವೈಫಲ್ಯ ಸರಿಪಡಿಸಿದ್ದೇವೆ. ಮತಕ್ಕಾಗಿ ಇಂಧನ ಇಲಾಖೆ ಮಾರಾಟ ಮಾಡಬೇಡಿ ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಕೃಷಿ ಪಂಪ್ ಸೆಟ್ ಗಳಿಗೆ ಹೊಸ ಸಂಪರ್ಕ ನೀಡಿರಲಿಲ್ಲ. ಇದರಿಂದ ರೈತರು ಹಾಗೂ ಕೃಷಿ ವಿಸ್ತರಣೆ ಚಟುವಟಿಕೆಗೆ ತೀವ್ರ ಸಮಸ್ಯೆಯಾಗಿತ್ತು. ೨೦೧೬-೧೭ ರಿಂದ ಕೃಷಿ ಪಂಪ್ ಸೆಟ್ ಗಳಿಗೆ ನೀಡುತ್ತಿದ್ದ ಸಬ್ಸಿಡಿ ಹಣವನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ನೀಡದೇ ಸತಾಯಿಸಿದರು. ಇದರಿಂದ ರೈತರು ಮಾತ್ರವಲ್ಲ ಉದ್ಯಮಕ್ಕೂ ತೊಂದರೆಯಾಯ್ತು. ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ೨೦೧೬ ರಿಂದ ಇಲ್ಲಿಯವರೆಗಿನ ಹಿಂಬಾಕಿಯೂ ಸೇರಿ ೧೮ ಸಾವಿರ ಕೋಟಿ ರೂ. ಸಬ್ಸಿಡಿ ಹಣವನ್ನು ಎಸ್ಕಾಂಗಳಿಗೆ ನೀಡಿದ್ದೇವೆ. ಇಲಾಖೆಯನ್ನು‌ ಇಷ್ಟು ದೊಡ್ಡ ಪ್ರಮಾಣದಲ್ಲಿ ಹಳ್ಳ ಹಿಡಿಸಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೋಡಿ ಈಗ ಉಚಿತ ವಿದ್ಯುತ್ ಎಂಬ ಸುಳ್ಳು ಭರವಸೆ ನೀಡುತ್ತಿದ್ದಾರೆ. ದುರಾಡಳಿತ ಹಗರಣದ ಮೂಲಕ ಇಂಧನ ಇಲಾಖೆಯನ್ನು ನಷ್ಟಕ್ಕೆ‌ ದೂಡಿದ್ದೇ ನಿಮ್ಮ ಸರ್ಕಾರದ ಮಹತ್ ಸಾಧನೆ ಎಂದಿದ್ದಾರೆ.

Leave a Reply