ಬೆಂಗಳೂರು: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಸರ್ಕಾರ ಬರ ಪರಿಹಾರ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಬಗ್ಗೆ ಗಮನ ಹರಿಸತೊಡಗಿದೆ. ಆದರೆ ಇದಕ್ಕೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಮಾದರಿ ನೀತಿ ಸಂಹಿತೆ ವಿನಾಯತಿ ಕೋರಿ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ರಾಜ್ಯದಲ್ಲಿ ಈಗಾಗಲೇ 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದ್ದು, ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿರುವ ಹಿನ್ನೆಲೆಯಲ್ಲಿ ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಹಾಗೂ ಹಾಗೂ ಸಭೆಯ ನಿರ್ಧಾರಗಳಿಗೆ ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ನೀಡಬೇಕೆಂದು ಅನುಮತಿ ಕೋರಿದ್ದಾರೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಹವಾಮಾನ ಇಲಾಖೆ ಮುನ್ಸೂಚನೆಯ ಪುಕಾರ, ರಾಜ್ಯದಲ್ಲಿ ಪ್ರಸಕ್ತ ವರ್ಷ ಮುಂಗಾರು ಮಳೆ ವಿಳಂಬವಾಗುವ ವರದಿ ನೀಡಿರುವುದರಿಂದ ಮುಂದಿನ ಎರಡು ತಿಂಗಳವರೆಗೆ ಜನರಿಗೆ ಹಾಗೂ ಜಾನುವಾರುಗಳಿಗೆ ಶುದ್ಧವಾದ ಹಾಗೂ ಸಮರ್ಪಕ ಕುಡಿಯುವ ನೀರು ನಿರ್ವಹಣೆ ಅತ್ಯವಶ್ಯಕವಾಗಿರುತ್ತದೆ ಎಂದೂ ಪತ್ರದಲ್ಲಿ ತಿಳಿಸಿದ್ದಾರೆ.




