ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಜಾರಕಿಹೊಳಿ ನಾಮಪತ್ರ ಸಲ್ಲಿಸಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಚಿಕ್ಕೋಡಿ ಅಭಿವೃದ್ಧಿಯೆಡೆಗೆ ಮೊದಲ ಹೆಜ್ಜೆಯಿದು! ಈ ಸುದೀರ್ಘ ಪಯಣದಲ್ಲಿ ನಿಮ್ಮ ಬೆಂಬಲ ಸದಾ ನನ್ನೊಂದಿಗಿರಲಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ನಾಮಪತ್ರ ಸಲ್ಲಿಕೆ ವೇಳೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಡಿಸಿಎಂ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಕಾಗಾವಾಡ ಶಾಸಕ ರಾಜು ಕಾಗೆ, ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ, ರಾಮದುರ್ಗ ಶಾಸಕ ಅಶೋಕ ಪಟ್ಟಣ, ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ಬೆಳಗಾವಿ ಉತ್ತರ ಶಾಸಕರಾದ ಆಸೀಫ್ ಸೇಠ್, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಮೊದಲಾದ ಕಾಂಗ್ರೆಸ್ ನಾಯಕರು ಹಾಜರಿದ್ದರು.




