ಬೆಂಗಳೂರು: ಬಿಜೆಪಿ ಶಾಸಕರನ್ನು ಹಾಗೂ ಮುಖಂಡರನ್ನು ಗುರಿಯಾಗಿಸಿ ನಡೆಯುತ್ತಿರುವ ಹಲ್ಲೆಗಳು ಹಾಗೂ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
ಈ ನಡುವೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಬಲಗೈ ಬಂಟ ರಾಜುವಿನ ಕಿರುಕುಳದಿಂದ ಆತ್ಮಹತ್ಯೆಗೀಡಾದ ಬೀದರ್ ನ ಗುತ್ತಿಗೆದಾರ ಸಚಿನ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿತುವ ಅವರು, ಗುತ್ತಿಗೆದಾರ ಸಚಿನ್ ಬರೆದಿರುವ ಡೆತ್ ನೋಟ್ ನಲ್ಲಿ ನಮ್ಮ ಪಕ್ಷದ ಶಾಸಕರಾದ ಬಸವರಾಜ್ ಮತ್ತಿಮಡು, ಬಿಜೆಪಿ ನಾಯಕರಾದ ಚಂದು ಪಾಟೀಲ್, ಮಣಿಕಂಠ ರಾಥೋಡ್ ಹಾಗೂ ಆಂದೋಲ ಸ್ವಾಮೀಜಿಯವರನ್ನು ಹತ್ಯೆ ಮಾಡಲು ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ್ಗೆ ಸುಪಾರಿ ನೀಡಿರುವ ಆತಂಕಕಾರಿ ಹಾಗೂ ಗಂಭೀರ ಮಾಹಿತಿ ಬಹಿರಂಗವಾಗಿದೆ ಎಂದು ಆರೋಪಿಸಿದ್ದಾರೆ.




