ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಸರ್ವೇಕ್ಷಣಾ ಘಟಕ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಪ್ರಾಥಮಿಕ ಆರೋಗ್ಯ ಕೇಂದ್ರ ಐಗೂರು, ಗ್ರಾಮ ಪಂಚಾಯಿತಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಸವೇಶ್ವರ ಪ್ರೌಢಶಾಲೆ, ನಿವೇಧಿತಾ ಶಾಲೆ ಐಗೂರು ಇವರ ಸಂಯುಕ್ತ ಆಶ್ರಯದಲ್ಲಿ ತಂಬಾಕು ಮುಕ್ತ ಭಾರತ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ ಏರ್ಪಡಿಸಿ ವಿಜೇತರಾದ ವಿಧ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ನೆನಪಿನ ಕಾಣಿಕೆ ನೀಡಲಾಯಿತು.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಚಿತ್ರ ಡಿ.ವಿ ಪ್ರಥಮ, ವಿನುತ ಸಿ. ಆರ್ ದ್ವಿತೀಯ, ಜಾನವಿ ಸಿ.ಪಿ ತೃತೀಯ ಬಹುಮಾನ ಪಡೆದರು. ಶ್ರೀ ಬಸವೇಶ್ವರ ಪ್ರೌಢಶಾಲೆ ಯಶೋಧ ಡಿ.ಎಂ ಪ್ರಥಮ ಬಹುಮಾನ, ನಾಗಮ್ಮ ದ್ವಿತೀಯ, ಅನುಷ ಕೆ ತೃತೀಯ ಬಹುಮಾನ, ನಿವೇದಿತ ಶಾಲೆ ಐಶ್ವರ್ಯ.ಕೆ ಪ್ರಥಮ, ಗಣೇಶ್ ದ್ವಿತೀಯ, ರೇಖಾ ತೃತೀಯ ಬಹುಮಾನ ಪಡೆದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ಜ್ಯೋತಿ, ಆಡಳಿತ ವೈದ್ಯಾಧಿಕಾರಿ ಡಾ.ಸೀತಾಲಕ್ಷೀ, ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸೋಶಿಯಲ್ ವರ್ಕರ್ ಶೈಲಾ ಶಾಮನೂರು ಹಾಜರಿದ್ದರು.



