ರಂಗಭೂಮಿಯ ಆಕರ ಗ್ರಂಥಗಳಿಗೆ ಬಹುಮಾನ

10 months ago

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿ ರಂಗಭೂಮಿಗೆ ಸಂಬಂಧಿಸಿದಂತೆ, ಈಗಾಗಲೇ ಪ್ರಕಟವಾಗಿರುವ ರಂಗಭೂಮಿಯ ಆಕರ ಗ್ರಂಥಗಳಿಗೆ ಬಹುಮಾನ ನೀಡಲು ತೀರ್ಮಾನಿಸಿದೆ.

ಕನ್ನಡ ರಂಗಭೂಮಿಯ ಬೆಳವಣಿಗೆ, ವೈವಿಧ್ಯತೆ ಹಾಗೂ ರಂಗಭೂಮಿಯ ಇತಿಹಾಸವನ್ನು ತಿಳಿಸುವಂತಹ ವಿಮರ್ಶಾತ್ಮಕ ಕೃತಿಗಳಿಗೆ ಈ ಬಹುಮಾನ ನೀಡಲಾಗುವುದು.

2024-25ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಈ ಬಹುಮಾನಕ್ಕಾಗಿ ಆಹ್ವಾನಿಸಲಾಗಿದ್ದು, ಪ್ರತಿ ಸಾಲಿಗೆ ತಲಾ ಒಂದು ಪುಸ್ತಕ ಬಹುಮಾನವನ್ನು ನೀಡಲಾಗುವುದು. ಈ ಬಹುಮಾನದ ಮೊತ್ತ ರೂ.25,000/-ಗಳಾಗಿರುತ್ತವೆ. ಕೃತಿಗಳನ್ನು ಲೇಖಕರೇ ನೇರವಾಗಿ ಅಕಾಡೆಮಿಗೆ ಕಳುಹಿಸಿಕೊಡಲು ಕೋರಲಾಗಿದೆ.

Leave a Reply