ಪಾಕ್ ಪರ ಘೋಷಣೆ: ನಾಸಿರ್ ಹುಸೇನ್ ಗೆ ತೊಡಕು ಸಾಧ್ಯತೆ

2 years ago

ಬೆಂಗಳೂರು: ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ವಿಧಾನಸೌಧದಲ್ಲಿ ನಡೆದ ವಿಜಯೋತ್ಸವ ವೇಳೆ ಕೇಳಿ ಬಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಇದೀಗ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರಿಗೆ ತೊಡಕಾಗುವ ಸಾಧ್ಯತೆ ಇದೆ.

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೂವರಲ್ಲಿ ಒಬ್ಬ ಆರೋಪಿ ಪಾಕಿಸ್ತಾನ್ ಎಂದು ಕೂಗಿದರೆ ಇನ್ನಿಬ್ಬರು ಜಿಂದಾಬಾದ್ ಎಂದು ಹೇಳಿರುವುದು ಧೃಡಪಟ್ಟಿದೆ. ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ಬಂದ ನಂತರ ಮೂವರನ್ನು ಪೊಲೀಸರು ಬಂಧಿಸಿದ್ದು, ಈ ಮೂವರು ವಿಧಾನಸೌಧ ಪ್ರವೇಶಿಸಲು ನಾಸಿರ್ ಹುಸೇನ್ ಪಾಸ್ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ನಾಸಿರ್ ಹುಸೇನ್ ವಿರುದ್ಧ ಪ್ರಕರಣ ದಾಖಲಿಸುವ ಸಂಬಂಧ ಪರಿಶೀಲನೆ ನಡೆಸಿದ್ದಾರೆ.

Leave a Reply