ಎಫ್ಎಸ್ಎಲ್ ವರದಿಯಲ್ಲಿ ಪಾಕ್ ಪರ ಘೋಷಣೆ ಕೂಗಿರುವುದು ಖಚಿತವಾಗಿದೆ: ಡಾ.ಜಿ.ಪರಮೇಶ್ವರ್

2 years ago

ಬೆಂಗಳೂರು: ಪಾಕ್ ಪರ ಘೋಷಣೆ ಅಕ್ಷಮ್ಯ ಅಪರಾಧ. ಇದರಲ್ಲಿ ಯಾವುದೇ ವ್ಯಕ್ತಿ ಶಾಮೀಲಾಗಿದ್ದರೂ ಅವರನ್ನು ಕ್ಷಮಿಸುವುದಿಲ್ಲ ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.

ಘಟನೆ ಸಂಬಂಧ ಮೂವರ ಬಂಧನ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಾಸಿರ್ ಹುಸೇನ್ ವಿರುದ್ಧ ಎಫ್.ಐ.ಆರ್ ದಾಖಲಿಸಿ ಬಂಧಿಸಬೇಕು ಎಂಬ ಒತ್ತಡ ಮತ್ತು ಇತರ ಬೆಳವಣಿಗೆಗಳ ನಡುವೆ ಪ್ರತಿಕ್ರಿಯೆ ನೀಡಿದ ಅವರು, ಕಾನೂನು ಪ್ರಕಾರ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುತ್ತೇವೆ ಎಂದರು.

ಇದೊಂದು ಸೂಕ್ಷ್ಮ ವಿಚಾರವಾಗಿದೆ. ಸರ್ಕಾರ ಯಾವುದೇ ಕಾರಣಕ್ಕೂ ದುಡುಕಿ ತೀರ್ಮಾನ ಕೈಗೊಳ್ಳುವುದಿಲ್ಲ. ಯಾವುದೇ ಒತ್ತಡಕ್ಕೂ ಮಡೆಯುವುದಿಲ್ಲ. ಎಫ್ ಎಸ್ ಎಲ್ ವರದಿ ಬಂದ ತಕ್ಷಣವೇ ಆರೋಪಿಗಳನ್ನು ಬಂಧಿಸಿದ್ದೇವೆ. ಇನ್ನೂ ತನಿಖೆ ಮುಂದುವರೆದಿದ್ದು ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಜರುಗಿಸಲಿದ್ದೇವೆ ಎಂದರು.

ಖಾಸಗಿಯವರು ಕೂಡಾ ಎಫ್ಎಸ್ಎಲ್ ವರದಿ ಬಿಡುಗಡೆ ಮಾಡಿದ್ದರು. ನಾವು ಅದನ್ನು ಅಧಿಕೃತ ಎಂದು ಪರಿಗಣಿಸುವುದಿಲ್ಲ. ನಾವು ಅವರಿಗೆ ಯಾವುದೇ ರೀತಿಯ ಮಾನ್ಯತೆ ನೀಡಿಲ್ಲ. ನಮ್ಮ ಇಲಾಖೆಯ ಎಫ್ಎಸ್ಎಲ್ ವರದಿಯಲ್ಲಿ ಆರೋಪಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಖಚಿತವಾಗಿದೆ. ಈ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿಯಲಿದ್ದು, ತನಿಖೆಯಿಂದ ಬರುವ ಮಾಹಿತಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದರು.

Leave a Reply