ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಮಹಿಳೆಯ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ.
ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು
ಮತ್ತೊಂದೆಡೆ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ಆಗಮಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಎಸ್‌ಐಟಿ ತಂಡದ ಪ್ರಮುಖರೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ಕಳೆದ ಎರಡು ದಿನಗಳ ಹಿಂದೆ ರೇವಣ್ಣ ಅವರನ್ನು ಅಪಹರಣ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಿರುವ ಕುರಿತಂತೆ ಸಿಎಂಗೆ ಮಾಹಿತಿ ನೀಡಿದ ತನಿಖಾ ತಂಡದ ಅಧಿಕಾರಿಗಳು, ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕ ತಂಡ ಬೀಡುಬಿಟ್ಟಿದ್ದು ಯಾವುದೇ ಸಮಯದಲ್ಲಿ ಪ್ರಜ್ವಲ್ ರೇವಣ್ಣ ಆಗಮಿಸಿದರೂ ಅವರನ್ನು ವಶಕ್ಕೆ ಪಡೆಯಲು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ.
ಪ್ರಜ್ವಲ್ ಪ್ರಕರಣದಲ್ಲಿ ಕೆಲವು ಮಹಿಳೆಯರು ಮಾಹಿತಿ ಹಂಚಿಕೊಳ್ಳಲು ನಿರಾಕರಿಸುತ್ತಿರುವ ವಿಷಯವನ್ನು ಸಿಎಂ ಗಮನಕ್ಕೆ ತಂದ ತನಿಖಾ ತಂಡದ ಅಧಿಕಾರಿಗಳು ಲಭ್ಯವಿರುವ ಮಾಹಿತಿಯನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.
ಎಲ್ಲವನ್ನು ಆಲಿಸಿದ ಸಿದ್ದರಾಮಯ್ಯ, ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ಇಲ್ಲಿಯವರೆಗೂ ಬಂಧನ ಮಾಡದಿರುವ ಕ್ರಮ ಸರಿಯಾದದ್ದಲ್ಲ. ಹೀಗಾಗಿ ಅಧಿಕಾರಿಗಳು ಲಭ್ಯವಿರುವ ಕಾನೂನು ಬಳಸಿಕೊಂಡು ತಕ್ಷಣವೇ ಆತನನ್ನು ಬಂಧಿಸಲು ಸೂಚಿಸಿದರು.




