ಬೆಂಗಳೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸುವುದರ ಜೊತೆಯಲ್ಲೇ, ವಿಜ್ಞಾನ ಅಧ್ಯಯನ ಹಾಗೂ ಸಂಶೋಧನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಭೋಸರಾಜು ತಿಳಿಸಿದ್ದಾರೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಯೋಜನೆಗಳ ಅಡಿಯಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಆವರಣದಲ್ಲಿ ಬೆಳಗಾವಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದಿದ್ದಾರೆ.
ಒಟ್ಟು 13 ಕೋಟಿಗಳ ಅಂದಾಜು ವೆಚ್ಚದಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಆವರಣದಲ್ಲಿ, ರಾಜಾಲಖಮಗೌಡ ಉದ್ಯಾನಕಾಶಿ ಅಭಿವೃದ್ಧಿ ಯೋಜನೆಯಡಿಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯದ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ. ಕರ್ನಾಟಕ ನೀರಾವರಿ ನಿಗಮದಿಂದ ರಾಜಾಲಖಮಗೌಡ ಉದ್ಯಾನಕಾಶಿ ಅಭಿವೃದ್ಧಿ ಯೋಜನೆಯಡಿ 5 ಎಕರೆ ಜಮೀನನ್ನು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ತಾರಾಲಯ ಸೊಸೈಟಿಗೆ ಕಾಮಗಾರಿ ಕೈಗೊಳ್ಳಲು ನೀಡಲಾಗಿದೆ. ಜಲಸಂಪನ್ಮೂಲ ಇಲಾಖೆ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗಳ ಸಮಪಾಲಿನಲ್ಲಿ ಈ ಕೇಂದ್ರ ನಿರ್ಮಾಣವಾಗಲಿದೆ.
ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಒಂದು ಫನ್ ಸೈನ್ಸ್ ಗ್ಯಾಲರಿ ಹಾಗೂ ಎರಡು ಥೀಮ್ಯಾಟಿಕ್ ಸೈನ್ಸ್ ಗ್ಯಾಲರಿಯನ್ನು ಹೊಂದಿರಲಿದೆ. ಇದಲ್ಲದೇ 150 ಜನರು ಒಟ್ಟಿಗೆ ಕುಳಿತುಕೊಳ್ಳಬಹುದಾದ ಆಡಿಟೋರಿಯಮ್ ಕೂಡಾ ನಿರ್ಮಾಣವಾಗಲಿದೆ. ಕಂಪ್ಯೂಟರ್ ರೂಂ ಕೂಡಾ ಇರಲಿದ್ದು ವಿದ್ಯಾರ್ಥಿಗಳು ಹೊಸತನ್ನು ಕಲಿಯಲು ಅನುವು ಮಾಡಿಕೊಡಲಿದೆ. ಮಿನಿ ತಾರಾಲಯ 10 ಮೀಟರ್ ಡೋಮ್ ಹೊಂದಿರಲಿದ್ದು ಒಟ್ಟಿಗೆ 60 ಜನರು ಕುಳಿತು ಕೊಳ್ಳುವ ಸಾಮರ್ಥ್ಯವನ್ನು ಹೊಂದಿರಲಿದೆ. 2 ಅಥವಾ 3ಡಿ ಪ್ರೊಜೆಕ್ಟರ್ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಣಯಕೈಗೊಳ್ಳಲಾಗುವುದು.
ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಟ್ಟಡ ಕಾಮಗಾರಿಯನ್ನು ರೂ. 700.00 ಲಕ್ಷಗಳಲ್ಲಿ ಕೈಗೊಳ್ಳಲು ಹಾಗೂ ಮಿನಿ 3ಡಿ ತಾರಾಲಯದ ಕಟ್ಟಡ ಕಾಮಗಾರಿಯನ್ನು ರೂ. 330.60 ಲಕ್ಷಗಳಲ್ಲಿ ನಿರ್ಮಿಸಲು ಟೆಂಡರ್ ಪ್ರಕ್ರಿಯೆ ಮುಗಿಸಿ ಕಾಮಗಾರಿ ಪ್ರಾರಂಭಿಸಲು ಆದೇಶ ನೀಡಲಾಗಿದೆ. ಈ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಲಿದೆ.



