ಬೆಂಗಳೂರು: ಪರಧರ್ಮ ಸಹಿಷ್ಣುತೆ ಸಂವಿಧಾನದ ಮೂಲ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ “ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ”ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ ಸಾರಿತ್ತು ಎಂದರು.
ಪ್ರವಾದಿಗಳು ಶಾಂತಿಯ ಧೂತರು. ಇಡೀ ಮಾನವ ಕುಲ ಶಾಂತಿಗಾಗಿ, ಪರಸ್ಪರತೆ, ಸಹೋದರತ್ವಕ್ಕಾಗಿ ಕೆಲಸ ಮಾಡಬೇಕು ಎನ್ನುವುದು ಪ್ರವಾದಿಗಳ ಬೋಧನೆಯಾಗಿದೆ. ನಮ್ಮ ಸಂವಿಧಾನದ ಮೂಲ ಆಶಯ ಕೂಡ ಭ್ರಾತೃತ್ವ ಮತ್ತು ಪರಧರ್ಮ ಸಹಿಷ್ಣುತೆಯೇ ಆಗಿದೆ. ಆದ್ದರಿಂದ ಸಂವಿಧಾನವನ್ನು ಆಚರಿಸುವುದು, ಪಾಲಿಸುವುದು ನಮ್ಮೆಲ್ಲರ ಗುರಿಯಾಗಲಿ ಎಂದರು.




