ಕಪ್ಪುಪಟ್ಟಿ ಧರಿಸಿ ಬಿಜೆಪಿ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

2 hours ago

ಕೆಪಿಸಿಸಿ ಪ್ರಚಾರ ಸಮಿತಿಯಿಂದ ಹೋರಾಟ

ಬೆಂಗಳೂರು: ನಗರದ ಕಾಂಗ್ರೆಸ್ ಭವನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ, ರಾಹುಲ್ ಗಾಂಧಿ ವಿರುದ್ದ ಎಫ್.ಐ.ಆರ್. ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಇಡಿ ದಾಳಿ ಖಂಡಿಸಿ ಕೆಪಿಸಿಸಿ ಪ್ರಚಾರ ಸಮಿತಿ ವತಿಯಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಸಂವಿಧಾನಕ್ಕೆ ಗೌರವ ಕೊಡುವುದಿಲ್ಲ. ತಳ ಸಮುದಾಯದ ರಾಜಕಾರಣಿಗಳನ್ನ ನೋಡಿದರೆ ಆಗುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರಂತಹ ಹಿರಿಯ ರಾಜಕಾರಣಿ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ ಮಾಡಿದರು. ದೇಶದಲ್ಲಿ ಬಿಜೆಪಿ ಸರ್ಕಾರ ಮನುವಾದ, ಕೋಮುವಾದಿಗಳ ಪರ ನಿಂತಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಖರ್ಗೆಯವರ ಭಾಷಣದ ಸ್ಥಳ ಶುದ್ಧೀಕರಣ ವಿರೋಧಿಸಿದ ರಾಹುಲ್ ಗಾಂಧಿಯವರ ವಿರುದ್ದ ಕೇಸ್ ದಾಖಲಿಸುತ್ತಾರೆ. ನ್ಯಾಯ ಕೇಳಲು ಹೋದವರಿಗೆ ಅನ್ಯಾಯ ಮಾಡಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ವತಿಯಿಂದ 31 ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಪ್ರತಿಭಟನಾ ನಿರತರು ಹೇಳಿದರು.

ಮಾಜಿ ಸಚಿವೆ ರಾಣಿ ಸತೀಶ್, ವಿಧಾನಪರಿಷತ್ ಮಾಜಿ ಸದಸ್ಯೆ ಜಲಜಾ ನಾಯಕ್, ರಾಜ್ಯ ಪ್ರಚಾರ ಸಮಿತಿ ಉಪಾಧ್ಯಕ್ಷ  ಅಬ್ದುಲ್ ಮುನೀರ್ , ಕೇಂದ್ರ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ., ಪಶ್ಚಿಮ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರಶೇಖರ್, ದಕ್ಷಿಣ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಅರುಣ್ ಕುಮಾರ್, ಉಪಾಧ್ಯಕ್ಷ ಹೆಡ್.ಡಿ.ಮಲ್ಲೇಶ್, ಪ್ರಚಾರ ಸಮಿತಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Leave a Reply