ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತವು ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ವಿಪರೀತ ಹೆಚ್ಚಿದ್ದಲ್ಲದೆ, ಅವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸುವ ಮೂಲಕ ಜನಸಾಮಾನ್ಯರನ್ನು ಹಗಲು ದರೋಡೆ ನಡೆಸುತ್ತಿದೆ. ಈ ಕೂಡಲೇ ಏರಿಸಿದ ಮನೆ ತೆರಿಗೆಯನ್ನು ಇಳಿಸಬೇಕೆಂದು ಒತ್ತಾಯಿಸಿ CPIM ನೇತೃತ್ವದಲ್ಲಿ ಜೂನ್ 20ರಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ನಡೆಸಲು ತೀರ್ಮಾನಿಸಿದೆ ಎಂದು CPIM ಮಂಗಳೂರು ನಗರ ದಕ್ಷಿಣ ಮತ್ತು ಉತ್ತರ ಸಮಿತಿಗಳು ಜಂಟಿ ಹೇಳಿಕೆಯಲ್ಲಿ ತಿಳಿಸಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಪಾಲಿಕೆ ಆಡಳಿತವು ಜನರಿಂದ ಬೇಕಾಬಿಟ್ಟಿ ಸಂಗ್ರಹಿಸುವ ತೆರಿಗೆಯ ಹಣವು ನಗರದ ಅಭಿವೃದ್ಧಿಗೆ ಬಳಕೆಯಾಗದೆ ಕೇವಲ ಭ್ರಷ್ಟಾಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂಬ ಸಂಶಯ ಜನರಲ್ಲಿ ಮನೆಮಾಡಿದೆ. ಮಂಗಳೂರಿನ ಅಭಿವೃದ್ಧಿಗೆ ಎಡಿಬಿಯಿಂದ ಪಡೆದ ಎರಡು ಹಂತದ ಸಾವಿರಾರು ಕೋಟಿ ಹಣದಿಂದ ಮಾಡಲುದ್ದೇಶಿಸಿರುವ ಅಭಿವೃದ್ಧಿ ಕಾಮಗಾರಿಗಳು ಅವೈಜ್ಞಾನಿಕ ಮತ್ತು ಕಳಪೆಮಟ್ಟದಿಂದ ಕೂಡಿದೆ ಎಂದು ಆರೋಪಿಸಿದೆ.
ಕುಂಡ್ಸೆಪ್ ಯೋಜನೆ ಸಂಪೂರ್ಣ ವೈಫಲ್ಯಗೊಂಡು ಜಲಸಿರಿ ಯೋಜನೆಯ ಸ್ಪಷ್ಟ ಕಣ್ಣೋಟ ನಗರ ಪಾಲಿಕೆಗೆನೆ ಇಲ್ಲವಾಗಿದೆ. ಎಡಿಬಿಯಿಂದ ಪಡೆದ ಸಾಲವನ್ನು ನಗರದ ಜನತೆಗೆ ಮೇಲೆ ಹೊರಿಸುವ ಮೂಲಕ ಕರ್ನಾಟಕ ರಾಜ್ಯದಲ್ಲೇ ಅತೀ ಹೆಚ್ಚು ಪ್ರಮಾಣದಲ್ಲಿ ಎರಡೆರಡು ಬಗೆಯ ತೆರಿಗೆಗಳನ್ನು ಸಂಗ್ರಹಿಸುತ್ತಿರುವ ಅಪಕೀರ್ತಿಗೆ ಮಂಗಳೂರು ಮಹಾನಗರ ಪಾಲಿಕೆ ಒಳಗಾಗಿದೆ ಎಂದಿದೆ.
ಈ ಬಗ್ಗೆ ಸಿಪಿಐಎಂ ಪಕ್ಷವು ಪಾಲಿಕೆಯ ವಿಪರೀತ ಪ್ರಮಾಣದ ಮನೆ ತೆರಿಗೆಯನ್ನು ವಿರೋಧಿಸಿ ಹಾಗೂ ಕೂಡಲೇ ಮನೆ ತೆರಿಗೆ ಇಳಿಸಲು ಒತ್ತಾಯಿಸಿ ಜೂನ್ 20ರಂದು ಸಂಜೆ 5ಕ್ಕೆ ಮನಪಾ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ನಡೆಸಲು ತೀರ್ಮಾನಿಸಿದೆ. ಇಂತಹ ಜನಪರ ಹೋರಾಟದಲ್ಲಿ ಮಂಗಳೂರಿನ ಪ್ರಜ್ಞಾವಂತ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು CPIM ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್ ಹಾಗೂ ಉತ್ತರ ಕಾರ್ಯದರ್ಶಿ ಪ್ರಮೀಳಾ ಶಕ್ತಿ ನಗರರವರು ಜಂಟಿ ಹೇಳಿಕೆ ನೀಡಿದ್ದಾರೆ.




