ಜಿ.ಎಂ.ನಂದಕುಮಾರ್, ಕೆ.ಟಿ.ಮಂಜುನಾಥ್ ಸೇರಿ ನೂರಾರು ಗುತ್ತಿಗೆದಾರರ ಬಂಧನ
ಬೆಂಗಳೂರು: ಬಿಬಿಎಂಪಿ ಪಾಲಿಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ನಂದಕುಮಾರ್ ಮತ್ತು ಬಿಬಿಎಂಪಿ ಕಾರ್ಯನಿರತ ಗುತ್ತಿದಾರರ ಸಂಘದ ಅಧ್ಯಕ್ಷ ಕೆ.ಟಿ.ಮಜುನಾಥ್ ನೇತೃತ್ವದಲ್ಲಿ ಶೇಕಡ 25% ಬಾಕಿ ಬಿಲ್ ಬಿಡುಗಡೆಗಾಗಿ ಒತ್ತಾಯಿಸಿ ಕಾಮಗಾರಿ ಸ್ಥಗಿತಗೊಳಿಸಿ ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ನೂರಾರು ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಗುತ್ತಿಗೆದಾರರು ಸಂಪೂರ್ಣ ಕಾಮಗಾರಿ ಬಿಲ್ ಮೊತ್ತವನ್ನು 75ರಷ್ಟು ಬಿಡುಗಡೆ ಮಾಡಿ 25%ರಷ್ಟು ಜಿ.ಎಸ್.ಟಿ.18%ಮತ್ತು ಇನ್ನಿತರೆ ಕಟಾವಣೆ ಮಾಡುತ್ತಿದ್ದಾರೆ. ಸಂಪೂರ್ಣ ಬಿಲ್ ಪಾವತಿಯಾಗದೇ ಇರುವ ಕಾರಣ ಗುತ್ತಿಗೆದಾರ ಸಂಕಷ್ಟದಲ್ಲಿ ಇದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದರು.
ಬಿಲ್ ಪಾವತಿ ವಿಳಂಬವಾಗುತ್ತಿರುವುದರಿಂದ ಬ್ಯಾಂಕ್ ನಲ್ಲಿ ಸಾಲದ ಮೇಲೆ ಬಡ್ಡಿ ಏರಿಕೆಯಿಂದ ಆರ್ಥಿಕವಾಗಿ ಸಂಕಷ್ಟದಲ್ಲಿ ಇದ್ದಾರೆ. ಕೂಡಲೆ ಶೇಕಡ 25%ರಷ್ಟು ಗುತ್ತಿಗೆದಾರರಿಗೆ ಪಾವತಿ ಮಾಡಿದರೆ ಸಂಕಷ್ಟದಿಂದ ಪಾರಾಗಬಹುದು ಎಂದರು.
ಬಿಬಿಎಂಪಿ ಮುಖ್ಯ ಆಯುಕ್ತರು ಗುತ್ತಿಗೆದಾರರ ಸಮಸ್ಯೆಗಳು ಹೇಳುತ್ತಿಲ್ಲ, ಉಡಾಫೆ ಉತ್ತರ ನೀಡುತ್ತಾರೆ. ಇಂದಿನಿಂದ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು, ಗುಂಡಿ ಮುಚ್ಚುವ ಕಾಮಗಾರಿಯನ್ನು ಯಾವ ಗುತ್ತಿಗೆದಾರರು ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಬಿಬಿಎಂಪಿ ಗುತ್ತಿಗೆದಾರರ ಫೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮಾಡಲು ಅವಕಾಶವಿದೆ. ಇಲ್ಲಿ ಮಾಡುವಂತಿಲ್ಲ. ಆದ್ದರಿಂದ ನಿಮ್ಮನ್ನ ಬಂಧಿಸಲಾಗುತ್ತದೆ ಎಂದು ಹೇಳಿ ನೂರಾರು ಗುತ್ತಿಗೆದಾರರನ್ನು ಪೊಲೀಸರು ಬಂಧಿಸಿದರು.




