ಬೆಂಗಳೂರು: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಶಾಮೀಲಾಗಿರುವ ಹಿನ್ನೆಲೆಯಲ್ಲಿ ಸಚಿವ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ನೇತ್ರತ್ವದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬೆಂಗಳೂರಿನಲ್ಲಿರುವ ಸಚಿವ ಪ್ರಿಯಾಂಕ ಖರ್ಗೆ ಅವರ ನಿವಾಸದ ಮುಂದೆ ಧರಣಿ ನಡೆಸಿ ಘೋಷಣೆ ಕೂಗಿದರು.
ಇದೆ ವೇಳೆ ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆಗೆ ಆಗ್ರಹಿಸಿ ಅವರ ಅ ನಿವಾಸಕ್ಕೆ ಪೋಸ್ಟರ್ ಅಂಟಿಸಿ ಒಳ ನುಗ್ಗಲು ಯತ್ನಿಸಿದ ಸಿ ಟಿ ರವಿ ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಸಿ.ಟಿ. ರವಿ, ಪ್ರಾಮಾಣಿಕ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ‘ಸೂಸೈಡ್ ಭಾಗ್ಯ’ ಹಾಗೂ ರಾಜಕೀಯ ಎದುರಾಳಿಗಳಿಗೆ ‘ಸುಪಾರಿ ಭಾಗ್ಯದ’ ‘ಗ್ಯಾರೆಂಟಿ’ ನೀಡಿದ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಮತ್ತು ಗುತ್ತಿಗೆದಾರ ಸಾವಿಗೆ ಕಾರಣೀಭೂತರಾದ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು’ ಎಂದಿದ್ದಾರೆ.




