ಬೆಂಗಳೂರು: ಕಾಂಗ್ರೆಸ್ ಭವನ ಮುಂಭಾಗದ ರೇಸ್ ಕೋರ್ಸ್ ರಸ್ತೆಯಲ್ಲಿ ಬಿಜೆಪಿ ಪಕ್ಷದ ನಾಯಕರು ವಕ್ಫ್ ಬೋರ್ಡ್ ವಿಷಯದಲ್ಲಿ ರೈತರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರತಿಕೃತಿ ಸುಟ್ಟು ಪ್ರತಿಭಟನೆ ನಡೆಸಿದರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್, ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಆನಂದ್, ಸಲೀಮ್, ಪ್ರಕಾಶ್, ಹೇಮರಾಜು, ಉಮೇಶ್ , ಚಂದ್ರಶೇಖರ್,ಪುಟ್ಟರಾಜು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಎಸ್.ಮನೋಹರ್, ಬಿಜೆಪಿ ಪಕ್ಷದವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ವಿದೇಶದಿಂದ ಕಪ್ಪುಹಣ ತರಲಾಗುತ್ತದೆ, ಯುವಕರಿಗೆ 2 ಕೋಟಿ ಉದ್ಯೋಗ ಎಂದು ಸುಳ್ಳು ಭರವಸೆ ನೀಡಿದರು. ಅದರ ಮುಂದಿನ ಭಾಗವೆ ಸಂಸದ ತೇಜಸ್ವಿಸೂರ್ಯರವರು ರೈತ ಆತ್ಮಹತ್ಯೆ ಸುಳ್ಳು ಹೇಳಿ ರಾಜ್ಯದ ಜನರ ದಿಕ್ಕು ತಪ್ಪು ಕೆಲಸ ಮಾಡುತ್ತಿದ್ದಾರೆ ಎಂದರು.
ರಾಜ್ಯದ ವಕ್ಫ್ ಬೋರ್ಡ್ ಬಜೆಪಿ ಆಡಳಿತದ ಅವಧಿಯಲ್ಲಿ ರೈತರಿಗೆ ನೋಟಿಸ್ ನೀಡಿದ್ದಾರೆ. ಇದನ್ನ ಮಾರೆಮಾಚುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಸಂಸದ ತೇಜಸ್ವಿಸೂರ್ಯ ರಾಜ್ಯದಲ್ಲಿ ವಕ್ಬ್ ಬೋರ್ಡ್ ವಿಷಯದಲ್ಲಿ ಸುಳ್ಳು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುತ್ತಿರುವ ಇಬ್ಬರು ನಾಯಕರನ್ನು ಕೂಡಲೆ ಬಂಧಿಸಬೇಕು ಎಂದು ಆಗ್ರಹಿಸಿದರು.
ಈಗಾಗಲೇ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ರೈತರ ಜಮೀನನ್ನು ವಶಪಡಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.




