ಜಾರಿ ನಿರ್ದೇಶನಾಲಯ ಕಚೇರಿ ಮುಂದೆ ಐವೈಸಿ ಕಾರ್ಯಕರ್ತರ ಪ್ರತಿಭಟನೆ

2 years ago

#Protest #IYC #workers EnforcementDirectorateoffice #narendrasonghtomar

ಕೇಂದ್ರ ಸಚಿವರ ಪುತ್ರನ ವಿರುದ್ಧ ಕ್ರಮಕ್ಕೆ ಆಗ್ರಹ

ದೆಹಲಿ: ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಅಧ್ಯಕ್ಷ ಶ್ರೀನಿವಾಸ್ ಬಿವಿ ನೇತೃತ್ವದಲ್ಲಿ ನೂರಾರು ಯುವ ಕಾಂಗ್ರೆಸ್ ಸದಸ್ಯರು ದೆಹಲಿಯ ಜಾರಿ ನಿರ್ದೇಶನಾಲಯದ (ಇಡಿ) ಕೇಂದ್ರ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದರು.

ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಪುತ್ರ ಲಂಚ ಸ್ವೀಕರಿಸುತ್ತಿರುವುದು ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಈ ವಿಷಯದ ಕುರಿತು ತನಿಖೆ ನಡೆಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ಈ ವಿಷಯದ ಬಗ್ಗೆ ಜಾರಿ ನಿರ್ದೇಶನಲಾಯ ಮೌನವಾಗಿರುವುದನ್ನು ಟೀಕಿಸಿದರು ಮತ್ತು ತೋಮರ್ ಮತ್ತು ಅವರ ಮಗನ ವಿರುದ್ಧ ಎಫ್‌ಐಆರ್ ದಾಖಲಿಸಲು ಆಗ್ರಹಿಸಿದರು.

Leave a Reply