ಬೆಂಗಳೂರು: ಹಾಲು ನೀರು ವಿದ್ಯುತ್ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಸತ್ಯವನ್ನು ಮರೆಮಾಚಿ ಜನರ ದಾರಿ ತಪ್ಪಿಸಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಪಾದಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ನೀವು ಎಷ್ಟೇ ಹೋರಾಟ ಮಾಡಿದರೂ ಜನ ನಂಬುವುದಿಲ್ಲ, ನಿಮ್ಮ ಹೋರಾಟದ ಪ್ರಯತ್ನ ಸಫಲವಾಗುವುದಿಲ್ಲ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸಿದ ಹೋರಾಟದಲ್ಲಿ ಮೊದಲ ಹಂತದ ಜನಾಕ್ರೋಶ ಯಾತ್ರೆ ಯಶಸ್ವಿಯಾಗಿದೆ. ಏಪ್ರಿಲ್ 1 ರಿಂದ 3 ರವರೆಗೆ ಸರ್ಕಾರದ ಬೆಲೆ ಏರಿಕೆ ವಿರುದ್ಧ ಯಶಸ್ವಿ ಅಹೋರಾತ್ರಿ ಧರಣಿ ನಡೆಸಿದ್ದೆವು. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಪಕ್ಷದ ಎಲ್ಲ ನಾಯಕರೂ ಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಹೋರಾಟ ಅತ್ಯಂತ ಯಶಸ್ವಿಯಾಗಿದೆ ಎಂದರು.
ಆದರೆ ರಾಜ್ಯ ಸರ್ಕಾರ ಈ ಹೋರಾಟಕ್ಕೆ ಸೊಪ್ಪು ಹಾಕಲಿಲ್ಲ ಹೀಗಾಗಿ ಇದರ ವಿರುದ್ಧ ಜಾನಂದೋಲನ ಆರಂಭಿಸಿದ್ದು, ರಾಜ್ಯಾದ್ಯಂತ ಬೆಲೆಯೇರಿಕೆ ವಿರುದ್ಧ ಹೋರಾಟ ಮಾಡಿದ್ದೇವೆ. ಮೂರು ಹಂತಗಳಲ್ಲಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದೇವೆ. ಮೊದಲ ಹಂತದ ಜನಾಕ್ರೋಶ ಯಾತ್ರೆ ಐದು ದಿನಗಳ ಕಾಲ ಒಂಭತ್ತು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದರು.
ಜನಾಕ್ರೋಶ ಯಾತ್ರೆಗೆ ನಮ್ಮೆಲ್ಲ ನಾಯಕರೂ ಬಂದಿದ್ದರು. ಆಯಾಯ ಭಾಗದ ನಾಯಕರು ಸಹಕರಿಸಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ 115 ಕಿ.ಮೀ ಪ್ರವಾಸ ಮಾಡಿದ್ದೇವೆ ಎಂದರು.
ರಾಜ್ಯ ಸರ್ಕಾರ ಹಣಕಾಸು ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾಗಿದೆ. ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ರಾಜ್ಯದ ಜನರಿಗೆ ಈ ಸರ್ಕಾರ ಅಭಿವೃದ್ಧಿ ನೀಡುತ್ತಿಲ್ಲ. ಬೆಲೆ ಏರಿಕೆ ಕೊಡುಗೆ ನೀಡುತ್ತಿದೆ ಎಂದರು.
ಈ ವೇಳೆ ಉಪಸ್ಥಿತರಿದ್ದ ವಿಧಾನಸಭೆಯ ವಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಹುಬ್ಬಳ್ಳಿ ಎನ್ ಕೌಂಟರ್ ಗೆ ಸ್ವಾಗತ, ಯಾರೇ ಇಂತಹ ಕೆಟ್ಟ ಕೆಲಸ ಮಾಡಿದ್ರೂ ಕಾನೂನು ರೀತಿಯಲ್ಲಿ ಇದೇ ಶಿಕ್ಷೆ ಆಗಬೇಕು. ಅನ್ನಪೂರ್ಣ ಅವರ ಕಾರ್ಯ ಶ್ಲಾಘನೀಯ ಎಂದರು.
ಜಾತಿ ಗಣತಿ ವರದಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರ ಹಿಂದೆ ಟೋಪಿ ಹಾಕಿಕೊಂಡು ಯಾಕೆ ಬಿದ್ದಿದ್ದಾರೆ. ಸಮೀಕ್ಷೆ ಮಾಡಿದಾಗ ಒಂದು ಕೋಟಿ ಇದ್ದರು. ಈಗ ಆರು ಕೋಟಿ ಜನ ಇದ್ದಾರೆ. ಒಂದು ಕೋಟಿ ಜನರನ್ನ ಸಮುದ್ರಕ್ಕೆ ಬಿಡಬೇಕಾ ಎಂದರು.
ಯತ್ನಾಳಗೆ ಕೊಲೆ ಬೆದರಿಕೆ ಕುರಿತು ಮಾಧ್ಯಮದವರು ಪ್ರಶ್ನೆಗೆ ಉತ್ತರಿಸಿದ ಅವರು, ಯಾರಿಗೇ ಆಗಲಿ ಕೊಲೆ ಬೆದರಿಕೆ ಹಾಕಬಾರದು. ಹಿಂದುತ್ವದ ಪರ ಮಾತಾಡುವ, ಹೋರಾಡುವ ಯಾರಿಗೇ ಆಗಲಿ ಅವರಿಗೆ ನಮ್ಮ ಬೆಂಬಲವಿದೆ. ಯತ್ನಾಳ್ ಕೊಲೆ ಬೆದರಿಕೆಯನ್ನು ನಾವು ಖಂಡಿಸುತ್ತೇವೆ ಎಂದರು.




