ಬೆಂಗಳೂರು: ಕಳೆದೆರಡು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿರುವುದನ್ನು ಬಿಜೆಪಿಯಿಂದ ಸಹಿಸಿಕೊಳ್ಳಲಾಗುತ್ತಿಲ್ಲ ಅದಕ್ಕಾಗಿ ಇಂತಹ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬಿಜೆಪಿಯ ಜನಾಕ್ರೋಶ ಯಾತ್ರೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿಗಳನ್ನು ಯಶಸ್ವಿಗೊಳಿಸಿದ್ದೇವೆ. ಮುಖ್ಯಮಂತ್ರಿ ಸಮತೋಲಿತ ಬಜೆಟ್ ಮಂಡಿಸಿದ್ದಾರೆ. ಇದರಿಂದ ಬಿಜೆಪಿಯವರಿಗೆ ಹೊಟ್ಟೆ ಉರಿ ಹೆಚ್ಚಾಗಿದೆ. ಹೀಗೇ ಸುಮನಿದ್ದರೆ ನಾವು ಜನರ ಮನಸ್ಸಿನಿಂದ ಕಳೆದುಹೋಗುತ್ತೇವೆ ಎಂಬ ಕಾರಣಕ್ಕೆ ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದರು.
ಜನಾಕ್ರೋಶ ಎಂದರೆ ಹಾದಿಬೀದಿಯಲ್ಲಿ ಜನ ನಮನ್ನು ಬಯ್ಯಬೇಕು. ಈಗ ಅಂತಹ ವಾತಾವರಣವಿಲ್ಲ. ಸಮಾಜದ ಪ್ರತಿಯೊಂದು ಸಮುದಾಯದ ಅಭಿವೃದ್ಧಿಗೂ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತದೆ. ಎಸ್ಸಿ/ಎಸ್ಟಿ, ಓಬಿಸಿ ಸೇರಿದಂತೆ ಈ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮೀಸಲಾತಿಯನ್ನು ನೀಡಲಾಗಿದೆ. ರಾಜ್ಯದಲ್ಲಿ ಶೇ.16 ರಷ್ಟು ಜನಸಂಖ್ಯೆ ಅಲ್ಪಸಂಖ್ಯಾತರಿದ್ದಾರೆ. ಅವರನ್ನು ಅಭಿವೃದ್ಧಿಯಿಂದ ಹಿಂದೆ ಬಿಡಲು ಸಾಧ್ಯವಿಲ್ಲ. ಹೀಗಾಗಿ ನಮ್ಮ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.




