ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ತೆರವು ಹೆಸರಿನಲ್ಲಿ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಶಕ್ತಿ ಪ್ರದರ್ಶನ ನಡೆಸಿತು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿ ಪಕ್ಷ ನಾಯಕ ಅಶೋಕ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ನಾಯಕರು ಧರಣಿ ನಡೆಸಿ, ನಮ್ಮ ಭೂಮಿ, ನಮ್ಮ ಹಕ್ಕು ಎಂದು ಘೋಷಿಸಿದರು.
ಒತ್ತುವರಿ ತೆರವು ಹೆಸರಿನಲ್ಲಿ ವಕ್ಫ್ ಬೋರ್ಡ್ ಹಿಂದೂಗಳ ಜಮೀನು, ದೇವಸ್ಥಾನ, ಮಠಮಂದಿರಗಳ ಜಮೀನು ಕಬಳಿಸಲು ಹುನ್ನಾರ ನಡೆಸಿದೆ ಎಂದು ಆಪಾದಿಸಿದ ಪ್ರತಿಭಟನಾಕಾರರು ವಕ್ಫ್ ಮಂಡಳಿಯನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ, ವಿಶ್ವವಿಖ್ಯಾತ ಎಂಜಿನಿಯರ್ ಸರ್ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್ ಮಂಡಳಿ ಕಬಳಿಸಿದೆ. ಕೇಂದ್ರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ವಕ್ಫ್ ಮಂಡಳಿಗೆ ನ್ಯಾಯಾಂಗದ ಅಧಿಕಾರ ನೀಡಿದೆ. ಇದನ್ನು ಬಳಸಿಕೊಂಡು ವಕ್ಫ್ ಮಂಡಳಿ ರೈತರ ಜಮೀನು ನುಂಗುತ್ತಿದೆ. ಕಾಂಗ್ರೆಸ್ ಅಧಿಕಾರ ಪಡೆಯುವ ರಾಜ್ಯಗಳಲ್ಲಿ ಮಿನಿ ಪಾಕಿಸ್ತಾನ ನಿರ್ಮಿಸುತ್ತಿದೆ ಎಂದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ. ಸಿದ್ದರಾಮಯ್ಯ ಎಂದರೆ ಅಹಿಂದ ನಾಯಕ ಅಲ್ಲ. ಅವರೀಗ ಮುಸ್ಲಿಮರ ಚಾಂಪಿಯನ್ ಆಗಲು ಮುಂದಾಗಿದ್ದಾರೆ. ಲವ್ ಜಿಹಾದ್, ಲ್ಯಾಂಡ್ ಜಿಹಾದ್ ಬಳಿಕ ರೇಷನ್ ಕಾರ್ಡ್ ಜಿಹಾದ್ ಆರಂಭಿಸಿದ್ದಾರೆ. 45 ವರ್ಷದಿಂದ ರೇಷನ್ ಕಾರ್ಡ್ ಹೊಂದಿದ್ದ ವೃದ್ಧೆಯೊಬ್ಬರು ಈಗ ಕಾರ್ಡ್ ಕಳೆದುಕೊಂಡಿದ್ದಾರೆ. ಆದರೆ ಸರ್ಕಾರ ಮರಳಿ ಅರ್ಜಿ ಹಾಕಿ ಎನ್ನುತ್ತಿದೆ. ಸರ್ಕಾರ ತಪ್ಪು ಮಾಡಿದರೆ, ಜನರು ಲಂಚ ಕೊಟ್ಟು ರೇಷನ್ ಕಾರ್ಡ್ ಮಾಡಿಸಿಕೊಳ್ಳಬೇಕಿದೆ ಎಂದರು.



