ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಮನವಿ
ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಶನಿಗೌಡ ಭೇಟಿ ಮಾಡಿ ಕೋಲಾರ ಜಿಲ್ಲೆ , ಬಂಗಾರಪೇಟೆ ಸರಕಾರಿ ಶಾಲೆ ಶಿಕ್ಷಕಿ ಮಂಜುಳರವರಿಗೆ ಸೂಕ್ತ ರಕ್ಷಣೆ ಮತ್ತು ವರ್ಗಾವಣೆ ಮಾಡಬೇಕು ಎಂದು ಮನವಿ ಸಲ್ಲಿಸಿದರು. ಈ ವೇಳೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಇದೇ ಸಂದರ್ಭದಲ್ಲಿ ರೋಶನಿಗೌಡ ಮಾತನಾಡಿ, ಸರಕಾರಿ ಮತ್ತು ಖಾಸಗಿ ಶಾಲೆಯ ಶಿಕ್ಷಕಿಯರಿಗೆ ಸೂಕ್ತ ರಕ್ಷಣೆ ನೀಡಬೇಕು ಮತ್ತು ಪಾಠ ಮಾಡಲು ಯಾವುದೇ ಅನುಕೂಲ ಮಾಡಿಕೊಡಬೇಕು. ಮಹಿಳಾ ಶಿಕ್ಷಕಿ ಕುಟುಂಬದ ಜವಾಬ್ಬಾರಿ ಜೊತೆಯಲ್ಲಿ , ಸಮಾಜ ಅಭಿವೃದ್ದಿಗಾಗಿ ಶ್ರಮಿಸುವಳು, ಅಂತಹ ಮಹಿಳೆಯರಿಗೆ ಭಯಭೀತಿ ಇಲ್ಲದೇ ಕೆಲಸ ಮಾಡುವಂತೆ ಆಗಬೇಕು. ಬಂಗಾರಪೇಟೆ ದುರುಂತದಿಂದ ಮಹಿಳೆಯರು ಅತಂಕದಲ್ಲಿ ಇದ್ದಾರೆ. ಮಹಿಳೆಯರು ಯಾವುದೇ ಭಯಪಡುವ ಅವಶ್ಯಕತೆ ನಿಮ್ಮ ಜೊತೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಇದೆ ಎಂದರು.
ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದವರು ನೀಡಿದ ಮನವಿಯನ್ನು ಸ್ವೀಕರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಮತ್ತು ಮಂಜುಳರವರಿಗೆ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ಭರವಸೆ ನೀಡಿದರು.




