ಪಂಚಾಯತಿಗಳಿಂದ ಬರುವ ಆದಾಯವನ್ನು ಅನುದಾನ ರೂಪದಲ್ಲಿ ಸಾರ್ವಜನಿಕರಿಗೆ ಪ್ರೋತ್ಸಾಹವಾಗಿ ನೀಡಿ
ಇಲಾಖೆಗಳ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆಯೋಗದಿಂದ ಶಿಫಾರಸ್ಸು
5ನೇ ರಾಜ್ಯ ಹಣಕಾಸು ಆಯೋಗದ ಸಭೆ
ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು: ಡಾ.ಸಿ.ನಾರಾಯಣಸ್ವಾಮಿ
ಬಳ್ಳಾರಿ: ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು, ಪ್ರತಿ ಪಂಚಾಯತಿಗಳಿಂದ ಬರುವ ಆದಾಯವನ್ನು ಅನುದಾನದ ರೂಪದಲ್ಲಿ ಸಾರ್ವಜನಿಕರಿಗೆ ಪ್ರೋತ್ಸಾಹವಾಗಿ ನೀಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ.ನಾರಾಯಣಸ್ವಾಮಿ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ನಗರದ ಜಿಲ್ಲಾ ಪಂಚಾಯತ್ ನ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ 5ನೇ ರಾಜ್ಯ ಹಣಕಾಸು ಆಯೋಗದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಆಯೋಗದಿಂದ ಶಿಫಾರಸು ಮಾಡಲಾಗುವುದು. ಕಟ್ಟಡ ತೆರಿಗೆ, ವಾಣಿಜ್ಯ ಮಳಿಗೆಗಳ ತೆರಿಗೆ ಬಾಕಿ ವಸೂಲಾತಿಗಳನ್ನು ಕ್ರಮ ವಹಿಸಬೇಕು ಎಂದರು.
ನಗರದ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ಆರ್ಥಿಕ ಸ್ಥಿತಿಗಳನ್ನು ಪರಿಶೀಲಿಸಿ ನಂತರ ಸಂಪನ್ಮೂಲಗಳ ಹಂಚಿಕೆ ಹಾಗೂ ವಿಭಜನೆಯ ಶಿಫಾರಸ್ಸುಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಆಸ್ತಿ ತೆರಿಗೆ, ಉದ್ದಿಮೆ ಪರವಾನಗಿ, ಬಾಡಿಗೆ ಆದಾಯ, ಬಳಕೆದಾರರ ಶುಲ್ಕ, ಇನ್ನಿತರ ಸಂಗ್ರಹ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸ್ವಂತ ಸಂಪನ್ಮೂಲ ಕ್ರೋಢೀಕರಣಕ್ಕೆ ನಗರ ಸ್ಥಳೀಯ ಸಂಸ್ಥೆಗಳು, ಪಂಚಾಯತ್ ರಾಜ್ ಸಂಸ್ಥೆಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ತೆರಿಗೆ ಪಾವತಿ ಖಾತಾ ಪ್ರತಿ ದಾಖಲೆಗಳನ್ನು ತ್ವರಿತವಾಗಿ ನೀಡುವಿಕೆ, ನೀರು ಸರಬರಾಜು, ಒಳಚರಂಡಿ, ಬೀದಿ ದೀಪಗಳು, ಘನತ್ಯಾಜ್ಯ ನಿರ್ವಹಣೆ, ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ವಿವರಗಳನ್ನು ನೀಡಿದರು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಮೂಲ ಸೌಕರ್ಯ ಒದಗಿಸಲು ಹೆಚ್ಚು ಅನುದಾನ, ವಿವಿಧ ಮಂಜೂರು ಅಗತ್ಯತೆ ಸೇರಿದಂತೆ ಬೇರೆ ಬೇರೆ ವಿಷಯಗಳ ಕುರಿತು ಆಯೋಗದ ಅಧ್ಯಕ್ಷರಿಗೆ ವಿನಂತಿಸಿದರು.
ಈ ಸಂದರ್ಭದಲ್ಲಿ 5ನೇ ರಾಜ್ಯ ಹಣಕಾಸು ಆಯೋಗದ ಸದಸ್ಯರಾದ ಮೊಹಮ್ಮದ್ ಸನಾವುಲ್ಲಾ, ಆರ್.ಎಸ್.ಪೊಂಡೆ, ಆಪ್ತ ಕಾರ್ಯದರ್ಶಿ ಕೆ.ಯಾಲಕ್ಕಿಗೌಡ, ಸಮಾಲೋಚಕರಾದ ಎಂ.ಕೆ ಕೆಂಪೇಗೌಡ, ಸಿ.ಜಿ.ಸುಪ್ರಸನ್ನ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಬಳ್ಳಾರಿ ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ವಿಜಯನಗರ ಜಿಪಂ ಸಿಇಒ ನೊಂಗ್ಜೆ ಮೊಹಮ್ಮದ್ ಅಲಿ ಅಕ್ರಮ್ ಶಾ, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.




