ಬೆಳಗಾವಿ: ಮುಂಚೆ ಸಾರಿಗೆ ಇಲಾಖೆ ಕಚೇರಿ ಬಹಳ ಹಳೆಯದಾಗಿತ್ತು. ಬಹು ದಿನಗಳಿಂದ ನೂತನ ಕಟ್ಟಡದ ಬೇಡಿಕೆ ಇತ್ತು ಅದರಂತೆ ಸಿಎಂ ಸಿದ್ದರಾಮಯ್ಯ ಅನುಮೋದನೆಯೊಂದಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಶ್ರಮದಿಂದ ನಗರದಲ್ಲಿ ಸಾರಿಗೆ ಇಲಾಖೆ ನೂತನ ಕಟ್ಟಡ ಲೋಕಾರ್ಪಣೆಗೊಂಡಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರು ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾರಿಗೆ ಇಲಾಖೆಗೆ ಇನ್ನು ಸಾಕಷ್ಟು ಕಾಯಕಲ್ಪ ನೀಡುವ ಯೋಜನೆಗಳಿವೆ. ಇಲಾಖೆಯಿಂದ ಸಾರ್ವಜನಿಕರಿಗೆ ಸಲಹೆ – ಸೂಚನೆ ಸೇರಿದಂತೆ ವಾಹನ ಚಾಲಕರಿಗೆ ಅಗತ್ಯ ತರಬೇತಿಗಳನ್ನು ನೀಡಬೇಕು. ವಾಹನ ಚಾಲನಾ ಪರವಾನಿಗೆ ನೀಡಲು ಇನ್ನಷ್ಟು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಿ ಪರವಾನಿಗೆ ನೀಡಬೇಕು. ಇದರಿಂದ ಅಪಘಾತಗಳ ಪ್ರಮಾಣ ಬಹಳಷ್ಟು ಕಡಿಮೆಯಾಗಲಿವೆ ಎಂದರು.
ಜಿಲ್ಲೆಯ ಅಗತ್ಯ ಸ್ಥಳಗಳಿಗೆ ಬಸ್ ಸೌಲಭ್ಯ ಕಲ್ಪಿಸಲು ಸಚಿವರು, ಶಾಸಕರೊಂದಿಗೆ ಚರ್ಚಿಸಿ ಅಗತ್ಯ ಪಟ್ಟಿ ತಯಾರಿಸಲಾಗಿದೆ. ಜನರ ಬೇಡಿಕೆಯಂತೆ ಹೆಚ್ಚುವರಿಯಾಗಿ ಬಸ್ ಗಳನ್ನು ಜಿಲ್ಲೆಗೆ ನೀಡಬೇಕು. ಅಂದಾಜು 500 ಬಸ್ ಗಳನ್ನು ಜಿಲ್ಲೆಗೆ ನೀಡಿದಲ್ಲಿ, ವಿದ್ಯಾರ್ಥಿಗಳ ಸಾರಿಗೆ ಸೌಲಭ್ಯಕ್ಕೆ ಅನುಕವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಹೆಚ್ಚುವರಿ ಬಸ್ ಗಳನ್ನು ಒದಗಿಸುವಂತೆ ಕೋರಿದರು.
ಹಳೆಯ ವಾಹನಗಳನ್ನು ಗುರುತಿಸಿ ಅಂತಹ ವಾಹನಗಳ ಆರ್.ಸಿ ನವೀಕರಣಕ್ಕೆ ಸೂಚನೆ ನೀಡಬೇಕು. ಸ್ಥಳೀಯವಾಗಿ ಟ್ರ್ಯಾಕ್ಟರ್ ಗಳಲ್ಲಿ ಅತಿ ಬಾರ ಮತ್ತು ಅಧಿಕ ಸ್ಪೀಕರ್ ಬಳಸಿ ಸಾರ್ವಜನಿಕರಿಗೆ ಕಿರಿ-ಕಿರಿ ಮಾಡಲಾಗುತ್ತಿದೆ ಅಂತಹ ವಾಹನಗಳನ್ನು ತಡೆದು ದಂಡ ವಿಧಿಸಬೇಕು ಎಂದರು.
ಜಿಲ್ಲೆಯಲ್ಲಿ ಇನ್ನಷ್ಟು ಬಸ್ ನಿಲ್ದಾಣಗಳ ನಿರ್ಮಾಣದ ಅವಶ್ಯಕತೆ ಇದೆ. ಸರ್ಕಾರದ ಹಂತದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಸ್ಥಳಗಳನ್ನು ಮಂಜೂರು ಮಾಡಲಾಗುವುದು. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಸ್ಥಳಗಳನ್ನು ಬಳಸಿಕೊಂಡು ಅಗತ್ಯವಿರುವ ಸ್ಥಳಗಳಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಸಾರಿಗೆ ಇಲಾಖೆ ಯೋಜನೆಗಳನ್ನು ರೂಪಿಸಬಹುದು ಎಂದು ಸಲಹೆ ನೀಡಿದರು.
















