ಶಿಕ್ಷಕರಿಗೆ ಗಳಿಕೆ ರಜೆ ಸೌಲಭ್ಯ
ರಜಕ್ಕೆ ತೆರಳಿರುವ ವಿದ್ಯಾರ್ಥಿಗಳಿಗೆ ಆಯಾ ಊರುಗಳಲ್ಲೇ ಊಟ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಸ್ವರೂಪದ ಬರಗಾಲ ಆವರಿಸಿರುವುದರಿಂದ ಪ್ರಸಕ್ತ ಬೇಸಿಗೆ ರಜೆಯ 41 ದಿನಗಳ ಕಾಲ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಪೂರೈಸಲು ಶಾಲಾ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದ 223 ತಾಲ್ಲೂಕುಗಳಲ್ಲಿರುವ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಏಪ್ರಿಲ್ 11ರಿಂದ ಮೇ 28ರವರೆಗೆ ಭಾನುವಾರ ಹೊರತುಪಡಿಸಿ ಮಿಕ್ಕೆಲ್ಲ ದಿನ ವಿದ್ಯಾರ್ಥಿಗಳಿಗೆ ನಿತ್ಯ ಮಧ್ಯಾಹ್ನ 12.30ರಿಂದ 2ರವರೆಗೆ ಬಿಸಿಯೂಟ ಪೂರೈಸಲಾಗುತ್ತದೆ ಎಂದು ತಿಳಿಸಿದೆ. ಬೇಸಿಗೆಯ ಉಷ್ಣಾಂಶ ಹೆಚ್ಚಿರುವ ಬೀದರ್, ರಾಯಚೂರು ಮುಂತಾದ ಜಿಲ್ಲೆಗಳಲ್ಲಿ ಬೆಳಿಗ್ಗೆ 10ರಿಂದ 11.30ರವರೆಗೆ ಬಿಸಿಯೂಟ ವಿತರಿಸುವಂತೆ ಸೂಚಿಸಲಾಗಿದೆ.
ಗ್ರಾಮವೊಂದರಲ್ಲಿ ಒಂದಕ್ಕಿಂತ ಹೆಚ್ಚು ಶಾಲೆಗಳಿದ್ದಲ್ಲಿ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಯನ್ನು ಬಿಸಿಯೂಟ ಪೂರೈಕೆ ಕೇಂದ್ರವಾಗಿ ಗುರುತಿಸಿದ್ದು, ಸುತ್ತಲಿನ 1–2 ಕಿ.ಮೀ ವ್ಯಾಪ್ತಿಯೊಳಗಿನ ಕಿರಿಯ ಪ್ರಾಥಮಿಕ, ಹಿರಿಯ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಈ ಕೇಂದ್ರಕ್ಕೆ ಊಟಕ್ಕೆ ಬರಬೇಕಿದೆ.
ಬಿಸಿಯೂಟ ಸೇವಿಸಲು ಇಚ್ಛಿಸುವ ವಿದ್ಯಾರ್ಥಿಗಳು ಒಪ್ಪಿಗೆ ಪತ್ರಕ್ಕೆ ಪಾಲಕರಿಂದ ಸಹಿ ಹಾಕಿಸಿ ನೀಡುವುದು ಕಡ್ಡಾಯ. ಕೂಲಿ ಅರಸಿ ಹೊರ ಜಿಲ್ಲೆಗಳಿಗೆ ಹೋಗುವವರ ಮಕ್ಕಳು ಹಾಗೂ ರಜೆ ಕಳೆಯಲು ಅಜ್ಜ–ಅಜ್ಜಿ ಮನೆಗೆ ತೆರಳುವ ಮಕ್ಕಳು ಆಯಾ ಗ್ರಾಮಗಳಲ್ಲಿನ ಶಾಲೆಗಳಲ್ಲೇ ಬಿಸಿಯೂಟ ಸೇವಿಸಲು ಅವಕಾಶವಿದೆ. ಈ ಅವಧಿಯಲ್ಲಿ ಕೆಲಸ ಮಾಡುವ ಶಿಕ್ಷಕರು ಗಳಿಕೆ ರಜೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.




