ಆಕ್ಷೇಪಣೆ ಸಲ್ಲಿಸಲು ಜ.23 ರವರೆಗೆ ಅವಧಿ
ಬೆಳಗಾವಿ: ಬೆಳಗಾವಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 64 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ 1:1 ಹಾಗೂ ತಾತ್ಕಾಲಿಕ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು (PROVISIONAL LIST) ದಿನಾಂಕ: 15-01-2025 ರಂದು ಬೆಳಗಾವಿ ಜಿಲ್ಲಾ ವೆಬ್ ಸೈಟ್ https://belagavi.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಆಯ್ಕೆ ಮತ್ತು ನೇರನೇಮಕಾತಿ ಪ್ರಾಧಿಕಾರ ಕಾರ್ಯದರ್ಶಿಗಳಾದ ಮೊಹಮ್ಮದ್ ರೋಷನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬೆಳಗಾವಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿದೆ.
ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಯ ಕುರಿತಾಗಿ ತಕರಾರು/ಆಕ್ಷೇಪಣೆಗಳಿದಲ್ಲಿ ದಿನಾಂಕ 16- 01-2025 ರಿಂದ ದಿನಾಂಕ 23-01-2025 ರಂದು ಸಂಜೆ 5.30 ಗಂಟೆಯ ಒಳಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ (ಸಿಬ್ಬಂದಿ ಶಾಖೆಗೆ) ಸಲ್ಲಿಸಬಹುದು.
ನಂತರ ಸ್ವೀಕೃತವಾಗುವ ತಕರಾರು/ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಸ್ವೀಕರಿಸಲಾದ ತಕರಾರು/ಆಕ್ಷೇಪಣೆಗಳನ್ನು ಪರಿಶೀಲಿಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ದಿನಾಂಕ 27-01-2025 ರಂದು ಸಂಜೆ 5.30 ಗಂಟೆಯ ನಂತರ ಪ್ರಕಟಿಸಲಾಗುವುದು.




