ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ಒತ್ತಾಯ
ಬೆಂಗಳೂರು: ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರು ಇಂದು ಸಹ ದಲಿತರ ಮೇಲೆ ಜಾತಿನಿಂದನೆ, ದೌರ್ಜನ್ಯ ನಡೆಯುತ್ತಿದೆ ಎಂದು ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ಅಧ್ಯಕ್ಷ ಕ್ರಾಂತಿರಾಜು ಹೇಳಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ವತಿಯಿಂದ ಯಾದಗಿರಿ ಪಿ.ಎಸ್.ಐ.ಪರುಶುರಾಮ್ ಶಂಕಾಸ್ಪದ ಸಾವು ಕುರಿತು ಸಿಬಿಐ ತನಿಖೆಗೆ ವಹಿಸಿ ಎಂದು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತಿಚೇಗೆ ರಾಜ್ಯದಲ್ಲಿ ದಲಿತ ಸಮುದಾಯದ ಅಧಿಕಾರಿಗಳು ಭ್ರಷ್ಟಚಾರದ ವಿರುದ್ಧ ಸೆಣಸಲು ಆಗದೇ ಸಾವಿಗೆ ಶರಣುಗಾತ್ತಿದ್ದಾರೆ ಎಂದರು.
ಯಾದಗಿರಿ ಪೊಲೀಸ್ ಠಾಣೆ ಪಿ.ಎಸ್.ಐ. ಪರುಶುರಾಮ್ ಶಂಕಸ್ಪಾದ ಸಾವು ಸಂಭವಿಸಿದ ಕಾರಣ ಕುರಿತು ಪರುಶುರಾಮ್ ರವರ ಪತ್ನಿ ಶ್ವೇತ್ರಾ ಅವರು ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ಮತ್ತು ಆತನ ಪುತ್ರ 30ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಹಾಗೂ ಜಾತಿ ನಿಂದನೆ ಮಾಡಿರುವುದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಪರುಶುರಾಮ್ ರವರು ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ. ಶಾಸಕರ ಮತ್ತು ಮಗನಾ ಮೊಬೈಲ್ ಕಾಲ್ ರೆಕಾರ್ಡ್ ಮತ್ತು ಸಿ.ಸಿ.ಕ್ಯಾಮರ ಪರಿಶೀಲನೆ ಮಾಡಿ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿರುವ ನಿಷ್ಟಾವಂತ ದಲಿತ ಸಮುದಾಯದ ಅಧಿಕಾರಿಗಳ ಮೇಲೆ ಕಿರುಕುಳ, ದೌರ್ಜನ್ಯ ನಡೆಯುತ್ತಿದೆ. ಲಂಚ, ಭ್ರಷ್ಟಚಾರ ತಾಂಡವವಾಡುತ್ತಿದೆ, ಪ್ರತಿ ಹುದ್ದೆಗೆ ವರ್ಗಾವಣೆಗೆ ಇಂತಿಷ್ಟು ಲಂಚ ಫಿಕ್ಸ್ ಮಾಡಿದ್ದಾರೆ, ಇಂತಹ ಸಂದರ್ಭದಲ್ಲಿ ನಿಷ್ಟಾವಂತ, ಪ್ರಾಮಾಣಿಕ ಅಧಿಕಾರಿಗಳು ಕೆಲಸ ಮಾಡಲು ಸಾಧ್ಯವೆ ಎಂದು ಪ್ರಶ್ನಿಸಿದರು.
ಅಧಿಕಾರಿಗಳನ್ನು ಎರಡು ವರ್ಷ ಅವಧಿಯ ಒಳಗಡೆ ವರ್ಗಾವಣೆ ಮಾಡುವಂತಿಲ್ಲ ಎಂಬ ನಿಯಮವಿದೆ. ಆದರೆ ವರ್ಗಾವಣೆ ಮಾಡುವ ಹಿಂದಿನ ಉದ್ದೇಶವೇನು? ಪೊಲೀಸ್ ಅಧಿಕಾರಿಗಳನ್ನು ಒಂದು ವರ್ಷದಲ್ಲಿ ವರ್ಗಾವಣೆ ಮಾಡಿದರೆ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ ಎಂದರು.
ಕೂಡಲೆ ಶಾಸಕ ಮತ್ತು ಆತನ ಪುತ್ರನನ್ನು ಬಂಧಿಸಬೇಕು. ಇಲ್ಲದೇ ಹೋದರೆ ಮುಂದಿನ ವಾರ ಪೊಲೀಸ್ ಮಹಾನಿರ್ದೇಶಕರ ಕಛೇರಿ ಮುಂಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ದಲಿತ ಸಮುದಾಯ ಮುಖಂಡರು, ಚಿಂತಕರು, ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ಮಾಡಲಾಗುವುದು ಎಂದರು.
ಪಿ.ಎಸ್.ಐ.ಪರುಶುರಾಮ್ ಶಂಕಾಸ್ಪದ ಸಾವಿಗೆ ನ್ಯಾಯ ಸಿಗಬೇಕು ಎಂದರೆ ಮುಖ್ಯಮಂತ್ರಿಗಳು ಸಿಬಿಐ ತನಿಖೆಗೆ ವಹಿಸಬೇಕು ಎಂಬುದು ನಮ್ಮ ಅಗ್ರಹ ಎಂದರು.
ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಚಿದರಹಳ್ಳಿ ಮಹಾದೇವಸ್ವಾಮಿ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಯಂತ್ರಣ ಸಮಿತಿ ವಿ.ಗಿರಿಕುಮಾರ್, ಹಿರಿಯ ಹೋರಾಟಗಾರ ಉಮಾಶಂಕರ್, ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಬಿ.ದೇವರಾಜ್ ಇದ್ದರು.



