ಫೆ.04 ರಂದು ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾ
ಬಳ್ಳಾರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಫೆ.04 ರಂದು ಬೆಳಿಗ್ಗೆ 09.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಜನಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಚಾಲನೆ ನೀಡುವರು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮಾರ್ಗ: ಜಾಥಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಆರಂಭಗೊಂಡು ಸಂಗಂ ವೃತ್ತ, ರಾಘವೇಂದ್ರ ಚಿತ್ರ ಮಂದಿರ ವೃತ್ತ, ಮೀನಾಕ್ಷಿ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ ಮಾರ್ಗವಾಗಿ ಮರಳಿ ಗಡಿಗಿ ಚೆನ್ನಪ್ಪ ವೃತ್ತ ಮೂಲಕ ಪುನಃ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಲಿದೆ.




