ಬಳ್ಳಾರಿ: ಮಳೆಯಿಂದ ಜಿಲ್ಲೆಯಾದ್ಯಂತ ವಾತಾವರಣ ಬದಲಾಣೆಯಿಂದ ಸಾಮಾನ್ಯ ಜ್ವರ ಪ್ರಕರಣಗಳು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಔಷಧಿಗಳನ್ನು ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ದಸ್ತಾನು ಇಡಲಾಗಿದೆ. ಸಾರ್ವಜನಿಕರು ಗಾಬರಿಗೊಳ್ಳುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದರು.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಜಿಲ್ಲೆಯಲ್ಲಿ ಜ್ವರ ಪ್ರಕರಣಗಳು ಹೆಚ್ಚಾಗಿ ಕಂಡುಬಂದ ಹಿನ್ನಲೆಯಲ್ಲಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ದಾಖಲಾದ ರೋಗಿಗಳ ಯೋಗಕ್ಷೇಮ ಮತ್ತು ಆರೋಗ್ಯ ವಿಚಾರಿಸಿ ಮಾತನಾಡಿದರು.
ಮಳೆ ಬಂದಿರುವ ಹಿನ್ನಲೆಯಲ್ಲಿ ವೈರಸ್‌ಗಳು ಸಾಮಾನ್ಯವಾಗಿದ್ದು, ಶೀತ ತಾಪಮಾನದಲ್ಲಿಯೂ ಸಹ ಉತ್ಪತ್ತಿಯಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಸಾರ್ವಜನಿಕರು ಪೌಷ್ಟಿಕ ಮತ್ತು ಬೆಚ್ಚಗಿನ ಆಹಾರ ಸೇವಿಸಬೇಕು ಎಂದು ನಿರ್ದೇಶನ ನೀಡಿದರು.
ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ವೈರಲ್ ಕಾಯಿಲೆಗಳನ್ನು ಎದುರಿಸಲು ಆರೋಗ್ಯಕರ ಜೀವಸತ್ವವುಳ್ಳ ಆಹಾರ ಸೇವಿಸಬೇಕು. ಕಲುಷಿತ ನೀರನ್ನು ಕುಡಿವುದನ್ನು ತಪ್ಪಿಸಬೇಕು. ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ವಿನಂತಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಶುಶೂಷ್ರಕ ಅಧೀಕ್ಷಕಿ ವಿಮಲಾ ಸೇರಿದಂತೆ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.



