ಮುಖ್ಯಮಂತ್ರಿಗಳಿಗೆ ಮನವಿ
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರ ಮೇಲೆ ಕ್ರಮ
ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರ ಜನಸಂಪರ್ಕ ಕಛೇರಿ ಆವರಣದಲ್ಲಿ ನಾಲ್ಕನೇ ಕಾರ್ಯಕ್ರಮ ಜನರೊಂದಿಗೆ ಜನಸೇವಕ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಶಾಸಕ ಎಸ್.ಸುರೇಶ್ ಕುಮಾರ್ ಜನರೊಂದಿಗೆ ಜನಸೇವಕ ಕಾರ್ಯಕ್ರಮದಲ್ಲಿ ಸಾರ್ವಜನಿಕರ 40ಕ್ಕೂ ಹೆಚ್ಚು ದೂರುಗಳಿಗೆ ಸ್ಪಂದಿಸಿ, ಪರಿಹಾರಕ್ಕೆ ಕ್ರಮ ಕೈಗೊಂಡರು.
ಇದೇ ಸಂದರ್ಭದಲ್ಲಿ ಮಾತನಾಡಿದ ಎಸ್.ಸುರೇಶ್ ಕುಮಾರ್, ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಎಲ್ಲ ವಾರ್ಡ್ ನಾಗರಿಕರು ಬಂದು ತಮ್ಮ ಸಮಸ್ಯೆಗಳಿಗೆ ಅಹವಾಲು ಸಲ್ಲಿಸಲು ಶಾಸಕರ ಜನ ಸಂಪರ್ಕ ಕಛೇರಿ ಹತ್ತಿರದಲ್ಲಿ ಇದೆ ಎಂದರು.
ಕಸ ವಿಲೇವಾರಿ ಸಮಸ್ಯೆ ಸಮರ್ಪಕವಾಗಿ ನಡೆಯುತ್ತಿದೆ ಮತ್ತು ಬಸವೇಶ್ವರನಗರ ಪ್ರಮುಖ ರಸ್ತೆಯಲ್ಲಿ ಹೈಮಾಸ್ಕ್ ದೀಪ ಬೇಕು ಎಂಬ ಮನವಿ ಸಲ್ಲಿಸಿದ್ದಾರೆ ಎಂದರು.
ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕೆಲವು ಭಾಗಗಳಲ್ಲಿ ನೀರಿನ ಸಮಸ್ಯೆಗಳು ಉಂಟಾಗುತ್ತಿದೆ, ಪೈಪ್ ಲೈನ್ ಪರಿಶೀಲನೆ ಮಾಡಲು ಜಲಮಂಡಳಿ ಅಧಿಕಾರಿಗಳಿಗೆ ಗಮನಕ್ಕೆ ತರಲಾಗಿದೆ ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದರಿಂದ ಅವರ ಆರೋಗ್ಯ ಜೊತೆಯಲ್ಲಿ ಸಾರ್ವಜನಿಕರ ಆರೋಗ್ಯ ಸಹ ಹದಗೆಡುತ್ತದೆ ಇದರ ಕುರಿತು ಕ್ರಮಕ್ಕೆ ಪೊಲೀಸ್ ಇಲಾಖೆ ತಿಳಿಸಲಾಗಿದೆ ಎಂದರು.
ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಲು ಅಧಿಕಾರಿಗಳು, ನಮ್ಮ ಕಾರ್ಯಕರ್ತರು ಭೇಟಿ ನೀಡುತ್ತಾರೆ. ದಯಾನಂದ ನಗರ ವಾರ್ಡ್ ನಲ್ಲಿರುವ ರೆಫರಲ್ ಆಸ್ಪತ್ರೆಯಲ್ಲಿ ಸುಲಭ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೆ.ಪಿ.ಎಸ್.ಸಿ. ವಾಣಿಜ್ಯ ತೆರಿಗೆ ಇಲಾಖೆ ಇನ್ಸ್ ಪೆಕ್ಟರ್ ಹುದ್ದೆ ಪರೀಕ್ಷೆ ಬರೆದರೂ ಇನ್ನು ಫಲಿತಾಂಶ ಬಂದಿಲ್ಲ ಎಂದು ಯುವಕರು ದೂರು ಹೇಳಿದ್ದಾರೆ. ಕೆ.ಪಿ.ಎಸ್.ಸಿ. ಫಲಿತಾಂಶ ಪ್ರಕಟಣೆ ಮಾಡಿ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ನೇರ ಭೇಟಿ ಮಾಡಿ ಒತ್ತಾಯ ಮಾಡಲಾಗುವುದು ಎಂದರು.
ಜನರ ನೇರ ಭೇಟಿಯಿಂದ ಸಮಸ್ಯೆಗಳು ಬೇಗನೆ ಪರಿಹಾರ ಸಿಗುತ್ತದೆ, ಸಾರ್ವಜನಿಕರ ಸಹ ಉತ್ತಮ ಸ್ಪಂದನೆ, ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದರು.
ಕಾರ್ಮಿಕ ಕಲ್ಯಾಣ ಇಲಾಖೆಯ ಗಾರೆಕೆಲಸ ಮತ್ತು ವೆಲ್ಡಿಂಗ್ ಕೆಲಸ ಮಾಡುವವರಿಗೆ ಕಿಟ್ ಗಳನ್ನು ವಿತರಿಸಲಾಯಿತು.
ಮಂಡಲ ಅಧ್ಯಕ್ಷ ಸುದರ್ಶನ್, ಬಿಬಿಎಂಪಿ ಮಾಜಿ ಸದಸ್ಯರುಗಳಾದ ಎಂ.ಮುನಿರಾಜು, ರಾಜಣ್ಣ, ಹೆಚ್.ಆರ್.ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ ಮತ್ತು ಬಿಬಿಎಂಪಿ , ಜಲಮಂಡಳಿ ಮತ್ತು ಬೆಸ್ಕಾಂ, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.




