ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟ ಎಂದು ಪರಿಗಣಿಸಲ್ಪಡುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಮಾರ್ಚ್ 1ರಿಂದ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದಿದ್ದವು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಮಧ್ಯಾಹ್ನ 1.30ರಿಂದ Karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.




