ರಾಯಚೂರು: ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ರೊಚ್ಚಿಗೆದ್ದ ಪೂಜಾರಿ, ಮುಸ್ಲಿಂ ಯುವಕನ ಕಣ್ಣು ಕಿತ್ತು, ಬರ್ಬರವಾಗಿ ಕೊಲೆ ಮಾಡಿರುವ ಅಮಾನುಷ ಘಟನೆ ತುಗ್ಗಲದಿನ್ನಿ ಗ್ರಾಮದಲ್ಲಿ ನಡೆದಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಖಾದರ್ ಭಾಷಾ (28) ಕೊಲೆಯಾದವರು ಕೃತ್ಯ ನಡೆಸಿದ ಪೂಜಾರಿ ಮಾರುತಿ ಪೊಲೀಸರಿಗೆ ಶರಣಾಗಿದ್ದಾನೆ. ಆಂಜನೇಯ ಗುಡಿ ಪೂಜಾರಿಯ ಪತ್ನಿಗೆ ಮುಸ್ಲಿಂ ಯುವಕ ಮೆಸೇಜ್ ಮಾಡಿದ್ದಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ.
ಕೊಲೆಯಾದ ಯುವಕ ಹಾಗೂ ಆರೋಪಿ ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಮಾರುತಿ ಅರ್ಚಕ ಆಗಿದ್ದನು. ಇವನ ಪತ್ನಿಯ ಮೇಲೆ ಖಾದರ್ ಭಾಷಾ ಕಣ್ಣು ಹಾಕಿದ್ದ ಎನ್ನುವ ಅನುಮಾನ ಮಾರುತಿಗೆ ಇತ್ತು. ಖಾದರ್ ಭಾಷಾ ಪತ್ನಿಗೆ ಮೆಸೇಜ್ ಮಾಡಿದ್ದಾನೆ ಎಂದು ಕೋಪಗೊಂಡ ಮಾರುತಿ ಖಾದರ್ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆ ಮಾಡಲಾಗಿದೆ. ಮಾರುತಿ ಕೊಲೆಗೈದು ತಾನೇ ಖುದ್ದಾಗಿ ಠಾಣೆಗೆ ಬಂದು ಶರಣಾಗತಿ ಆಗಿದ್ದಾನೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬೆಳಿಗ್ಗೆ 9 ಗಂಟೆಗೆ ಸುಮಾರಿಗೆ ತುಗ್ಗಲದಿನ್ನಿ ಗ್ರಾಮದಲ್ಲಿ ಕೃತ್ಯ ನಡೆದಿದೆ. ಕೊಲೆಯಲ್ಲಿ 6 ರಿಂದ 7 ಜನ ಭಾಗಿಯಾಗಿರುವ ಶಂಕೆ ಇದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ತಸಿಕ್ತವಾಗಿ ಬಿದ್ದಿದ್ದ ಖಾದರ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.




