ಅಪ್ರಾಪ್ತ ವಯಸ್ಸಿನ ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಗೆ ಶಿಕ್ಷೆ

2 years ago

ಕೊಪ್ಪಳ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಮುಧೋಳ ಗ್ರಾಮದ ನಜೀರ್ಸಾಬ ಮೋಟೆಖಾನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೊ)ವು ಆರೋಪಿಗೆ ಶಿಕ್ಷೆ ವಿಧಿಸಿದೆ.

2019ರ ಮಾರ್ಚ್ 1 ರಂದು ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಮುಧೋಳ ಗ್ರಾಮದ ನಿವಾಸಿ ನಜೀರಸಾಬ ಮೋಟೆಖಾನ ಇತನು ಅದೇ ಗ್ರಾಮದ ಬಾಧಿತಳು ಅಪ್ರಾಪ್ತಳು ಎಂದು ಗೊತ್ತಿದ್ದರೂ ಅವಳಿಗೆ ಪುಸಲಾಯಿಸಿ ಅಪಹರಿಸಿ ಕೊಪ್ಪಳಕ್ಕೆ ಕರೆದುಕೊಂಡು ಬಂದು ಕುವೆಂಪು ನಗರದಲ್ಲಿರುವ 500 ಪ್ಲಾಟ ನಿವಾಸಿ ಯಂಕಪ್ಪ ಕಟ್ಟಿಮನಿ ಇವರ ಜನತಾ ಮನೆಯಲ್ಲಿ ಬಾಧಿತಳಿಗೆ ಬಲಾತ್ಕಾರ ಮಾಡಿದ್ದ.

ಮಾರ್ಚ್ 1 ರಿಂದ 6 ರವರೆಗೆ ಬಾಧಿತಳನ್ನು ತನ್ನ ಮನೆಯಲ್ಲಿಟ್ಟುಕೊಂಡು 6 ರಿಂದ 7 ಸಲ ಬಲಾತ್ಕಾರ ಮಾಡಿರುವ ಆರೋಪ ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಯಲಬುರ್ಗಾ ಪೊಲೀಸ್ ಠಾಣೆ ಪಿಎಸ್ಐ ಬಸವರಾಜ ಆರೋಪಿ ವಿರುದ್ದ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ರಮೇಶರೊಟ್ಟಿ ಸಿಪಿಐ ಯಲಬುರ್ಗಾ ನಿರ್ವಹಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣ ಸ್ಪೇ.ಎಸ್ಸಿ(ಪೋಕ್ಸೊ) ಸಂ: 19/2019ರಲ್ಲಿ ದಾಖಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿ ನಜೀರ್ಸಾಬ ಮೋಟೆಖಾನ ಮೇಲಿನ ಆರೋಪಗಳು ಸಾಬೀತಾಗಿವೆ ಎಂದು 10 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 40,000 ದಂಡ ಭರಿಸುವಂತೆ ಆದೇಶಿಸಿ ಕುಮಾರ ಡಿ.ಕೆ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರು (ಪೋಕ್ಸೊ) ಕೊಪ್ಪಳ ಇವರು 2024ರ ಡಿಸೆಂಬರ್ 31 ರಂದು ತೀರ್ಪು ಹೊರಡಿಸಿರುದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು. ಯಲಬುರ್ಗಾ ಪೊಲೀಸ್ ಠಾಣೆ ಸಿಬ್ಬಂದಿ ವಿಜಯಲಕ್ಷ್ಮಿ ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಸಕಾಲಕ್ಕೆ ಹಾಜರುಪಡಿಸುವಲ್ಲಿ ಸಾಕಷ್ಟು ಸಹಕರಿಸಿದ್ದರು.

Leave a Reply