ಜ.27 ರಿಂದಲೇ ನೊಂದಣಿ ಪ್ರಾರಂಭ : ಗಂಗಾಧರಸ್ವಾಮಿ ಜಿ.ಎ
ದಾವಣಗೆರೆ: ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆಕಾಳು ಉತ್ಪನ್ನವನ್ನು ರೈತರಿಂದ ನೇರವಾಗಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಸರ್ಕಾರ ಆದೇಶಿಸಿದ್ದು ಖರೀದಿಗೆ ನೊಂದಣಿಯನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
- ಸರ್ವಜನಾಂಗದ ಶಾಂತಿಯ ತೋಟವೇ ನಮ್ಮ ಗುರಿ: ಸಿದ್ದರಾಮಯ್ಯ
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
ಅವರು ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉತ್ತಮ ಗುಣಮಟ್ಟದ ಕಡಲೆಕಾಳಿಗೆ ಸರ್ಕಾರ ಪ್ರತಿ ಕ್ವಿಂಟಾಲ್‍ಗೆ 5650 ರೂ. ನಿಗದಿಪಡಿಸಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಕಡಲೆಕಾಳಿನ ಬೆಲೆ ಕುಸಿದಿದ್ದು, ರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ರೈತರ ಹಿತಕಾಯಲು ಸರ್ಕಾರದ ವತಿಯಿಂದ ಜಿಲ್ಲೆಯಲ್ಲಿ ಕೂಡಲೆ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಗೆ ಜಗಳೂರು ಮತ್ತು ಚನ್ನಗಿರಿ ಎಪಿಎಂಸಿ ಆವರಣದಲ್ಲಿ ರೈತರ ನೊಂದಣಿ ಕಾರ್ಯ ಪ್ರಾರಂಭಿಸಬೇಕು ಎಂದು ತಿಳಿಸಿದರು.
ನೊಂದಣಿಗೂ ಮುನ್ನ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿರಬೇಕು. ಖರೀದಿ ಕೇಂದ್ರಕ್ಕೆ ಅವಶ್ಯಕವಿರುವ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಬೇಕು ಹಾಗೂ ಖರೀದಿಗೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಪೂರ್ವಸಿದ್ಧತೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಫ್‍ಎಕ್ಯೂ ಗುಣಮಟ್ಟದ ಕಡಲೆಕಾಳಿಗೆ ಪ್ರತಿ ಕ್ವಿಂಟಾಲ್ ರೂ. 5650 ರೂ. ಬೆಂಬಲ ಬೆಲೆ ನಿಗದಿಪಡಿಸಿದ್ದು, ನಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾ ಮಂಡಳಿ ರಾಜ್ಯದ ವತಿಯಿಂದ ಖರೀದಿ ಏಜೆನ್ಸಿಯಾಗಿದೆ. ಜ.27 ರಿಂದ 80 ದಿನಗಳ ಕಾಲ ರೈತರಿಂದ ನೊಂದಣಿ ಕಾರ್ಯ ನಡೆಯಲಿದ್ದು, ಖರೀದಿಯೂ ಕೂಡ 90 ದಿನಗಳ ಕಾಲ ನಡೆಯಲಿದೆ. ಪ್ರತಿ ಎಕರೆಗೆ 4 ಕ್ವಿಂಟಾಲ್, ಪ್ರತಿ ರೈತರಿಂದ ಗರಿಷ್ಠ 20 ಕ್ವಿಂ. ಕಡಲೆಕಾಳು ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ. ರೈತರು ಇದರ ಸದುಪಯೋಗ ಮಾಡಿಕೊಳ್ಳಲು ತಿಳಿಸಿದ್ದಾರೆ.




