ಬಳ್ಳಾರಿ: ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳಿ ನಿಯಮಿತ ಏಜೆನ್ಸಿ ವತಿಯಿಂದ ಎಫ್ಎಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲಾಗುತ್ತಿದೆ ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಅಧ್ಯಕ್ಷ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯಂತೆ ಪ್ರತಿ ಕ್ವಿಂಟಾಲ್ಗೆ ರೂ. 6,789 ರಂತೆ ರೈತರಿಂದ ಖರೀದಿಸಲಾಗುತ್ತದೆ. ಜಿಲ್ಲೆಯ ವಿವಿಧೆಡೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಖರೀದಿ ಕೇಂದ್ರಗಳ ವಿಳಾಸ: ಬಳ್ಳಾರಿ ಎಪಿಎಂಸಿ ಆಡಳಿತ ಕಚೇರಿ- ಈರೇಶ (ಮೊ.7353155205), ಬಳ್ಳಾರಿ ತಾಲ್ಲೂಕಿನ ಕಪ್ಪಗಲ್ಲು ಗ್ರಾಮದ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ನಿಯಮಿತ- ಈರೇಶ (ಮೊ.7353155205), ಸಿರುಗುಪ್ಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-ಬಸವರಾಜ (ಮೊ.9845166601.
ಸಂಡೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-ಶಿವಲಿಂಗಪ್ಪ (ಮೊ.9980676497), ಚೋರನೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-ಮಲಿಯಪ್ಪ (ಮೊ.9945352466), ಕುರುಗೋಡಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ- ಹುಸೇನ್ ಸಾಬ (ಮೊ.8951307333), ಬಳ್ಳಾರಿ ಟಿಎಪಿಸಿಎಂಎಸ್-ನಾಗರಾಜ (ಮೊ.908841654).
ಬೇಕಾದ ದಾಖಲೆಗಳು: ಆಧಾರ್ಕಾರ್ಡ್, ಪ್ರಸ್ತಕ ಸಾಲಿನ ಪಹಣಿ ಪತ್ರ, ಎಫ್ಐಡಿ ಕಡ್ಡಾಯ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿರಬೇಕು. ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ.
ರೈತರು ಒಣಗಿದ ಹಾಗೂ ಸ್ವಚ್ಛ ಎಫ್ಎಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಕೇಂದ್ರಕ್ಕೆ ಮಾರಾಟ ಮಾಡಲು ತರಬೇಕು. ಶೇಂಗಾ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಹಾಗೂ ನೋಂದಣಿ ಚೀಟಿಯನ್ನು ಪಡೆಯಬೇಕು. ನೋಂದಾಯಿಸಕೊಂಡ ರೈತರಿಂದ ಪ್ರತಿ ಎಕರೆಗೆ 03 ಕ್ವಿಂಟಾಲ್ನಿಂದ ಗರಿಷ್ಠ 15 ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು.
ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು, ರೈತರೇ ನೇರವಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.




