ಬೆಂಗಳೂರು: ಸಪ್ನ ಬುಕ್ ಹೌಸ್ ಪ್ರಕಟಿಸಿರುವ ಕಲಾವಿದೆ ಪೂರ್ಣಿಮಾ ಸುರೇಶ್ ಅವರ ರಂಗಭೂಮಿಯ ಒಡನಾಟದ ಕಥನವನ್ನು ಹೇಳುವ ಕೃತಿ ‘ರಂಗ ರಂಗೋಲಿ’ ನವಂಬರ್ 19ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಬಿಡುಗಡೆಯಾಗಲಿದೆ. ಹಿರಿಯಡ್ಕದ ಅಮೋಘ (ರಿ) ಏರ್ಪಡಿಸಿರುವ ಈ ಕಾರ್ಯಕ್ರಮವು ಬೆಂಗಳೂರಿನ ನರಸಿಂಹ ರಾಜ ಕಾಲೋನಿಯಲ್ಲಿರುವ ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ನಡೆಯಲಿದೆ.

ಖ್ಯಾತ ಚಲನಚಿತ್ರ ನಿರ್ದೇಶಕ, ರಂಗಭೂಮಿಯಲ್ಲಿ ಸಕ್ರಿಯರಾದ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಟಿ.ಎಸ್.ನಾಗಾಭರಣ ಅವರು ಪುಸ್ತಕವನ್ನು ಬಿಡುಗಡೆ ಮಾಡಲಿದ್ದು, ಲೇಖಕಿ, ಪ್ರಾಧ್ಯಾಪಕಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ, ರಂಗಭೂಮಿಯಲ್ಲಿ ಮಹತ್ವದ ಸಾಧನೆಗಳನ್ನು ಮಾಡಿದ ಡಾ.ಪದ್ಮಿನಿ ನಾಗರಾಜು ಅವರು ಕೃತಿ ಪರಿಚಯವನ್ನು ಮಾಡಿಕೊಡಲಿದ್ದಾರೆ.
ಭಾರತೀಯ ವಿದ್ಯಾಭವನದ ಮಾಧ್ಯಮ ಭಾರತಿ ನಿರ್ದೇಶಕ ಎನ್.ಎಸ್.ಶ್ರೀಧರ ಮೂರ್ತಿಯವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದು ಲೇಖಕಿ ಪೂರ್ಣಿಮಾ ಸುರೇಶ್ ಮತ್ತು ಸಪ್ನ ಬುಕ್ ಹೌಸ್ ನ ಕನ್ನಡ ವಿಭಾಗದ ಸಂಚಾಲಕ ಆರ್. ದೊಡ್ಡೇಗೌಡ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.
ಕಾರ್ಯಕ್ರಮದ ಆರಂಭಕ್ಕೆ ಮುಂಚೆ ಮಲೆನಾಡಿನ ಖ್ಯಾತ ಗಾಯಕಿ ಭಾಗ್ಯಶ್ರೀಗೌಡ ಅವರಿಂದ ಗಾಯನ ಕಾರ್ಯಕ್ರಮವಿದೆ.




