ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪ್ರತಿಷ್ಠೆಯನ್ನು ಬದಿಗಿಟ್ಟು ಕೆಲಸ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ನಿರ್ದೇಶನ ನೀಡಿದ್ದಾರೆ.
- ಪ್ರತಿ ಜಿಲ್ಲೆಯಲ್ಲಿ ತಲಾ 50000 ನಿವೇಶನ ಹಂಚಿಕೆ: ಜಿ.ಪರಮೇಶ್ವರ್
- ಚಲೋ ಬೆಂಗಳೂರು – ಜನರ ಹಕ್ಕುಗಳಿಗಾಗಿ SDPI ಹೋರಾಟ
- ಕಟ್ಟಡಗಳ ನೆಲಸಮದಿಂದ ದೇಶ ದುರ್ಬಲಗೊಳ್ಳುತ್ತದೆ
- ಕನ್ನಡ ಸಾಹಿತ್ಯ ಪರಿಷತ್ತು ವ್ಯಕ್ತಿ ಕೇಂದ್ರಿತವಾದರೆ ಅಪಾಯಕಾರಿ
- ನೂರರ ಕಸಾಪ ತೊಡಬೇಕಾಗಿರುವ ರೂಪ
ರಾಜ್ಯದ ಎಲ್ಲಾ ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ನದ ಅಧ್ಯಕ್ಷರೊಂದಿಗೆ ಸಮಾಲೋಚನಾ ಸಭೆ ನಡೆಸಿದ ಅವರು, ಈ ಹುದ್ದೆಯಲ್ಲಿ ತಾವು ಎಷ್ಟು ದಿನ ಇರುತ್ತೇವೆ ಎಂಬುದು ಮುಖ್ಯವಲ್ಲ. ಅಧಿಕಾರದಲ್ಲಿದ್ದಾಗ ನೆನಪಿನಲ್ಲಿ ಉಳಿಯುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಪಕ್ಷದ ಅಧ್ಯಕ್ಷ ಸ್ಥಾನ ಅತ್ಯಂತ ದೊಡ್ಡ ಹುದ್ದೆ. ಮಂತ್ರಿ, ಶಾಸಕ ಎಲ್ಲರಿಗಿಂತಲೂ ಅಧ್ಯಕ್ಷ ಸ್ಥಾನ ಮಹತ್ವದ್ದಾಗಿದೆ. ಇದರ ಘನತೆಯನ್ನು ಎಲ್ಲರೂ ಅರಿತುಕೊಳ್ಳಬೇಕು. ತಾನು ಈ ಹುದ್ದೆಯಲ್ಲಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ. ಆದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಮತ್ತೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರುವುದು ತಮ್ಮ ಗುರಿಯಾಗಿದೆ ಎಂದರು.
ಈ ಮಹತ್ವಾಕಾಂಕ್ಷೆಯೊಂದಿಗೆ ಎಲ್ಲರೂ ಕೆಲಸ ಮಾಡಬೇಕು. ಕೆಲಸ ಮಾಡದೇ ಲೆಟರ್ ಹೆಡ್ಗಾವಗಿ ಪದಾಧಿಕಾರಿಗಳ ಸ್ಥಾನ ಪಡೆದಿರುವವರನ್ನು ಮುಲಾಜಿಲ್ಲದೇ ಕಿತ್ತೊಗೆಯುವುದಾಗಿ ಎಚ್ಚರಿಕೆ ನೀಡಿದರು.
ಹೆಸರಿಗಷ್ಟೇ ಅಧ್ಯಕ್ಷರು, ಪದಾಧಿಕಾರಿಗಳಾಗಿ ಬೂತ್ಮಲಟ್ಟದಲ್ಲಿ ಪಕ್ಷ ಸಂಘಟನೆ ಮಾಡದಿದ್ದರೆ ಸಂದರ್ಭ ಬಂದಾಗ ಅಧಿಕಾರ ಕೊಡಿ ಎಂಬುವವರನ್ನು ಇನ್ನು ಮುಂದೆ ಪರಿಗಣಿಸುವುದಿಲ್ಲ. ಪ್ರತಿ ಹಂತದಲ್ಲೂ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದ ಬಳಿಕವೇ ಅಧಿಕಾರ ಹಂಚಿಕೆ ಮಾಡಲಾಗುತ್ತದೆ. ಕೆಲಸ ಮಾಡದೇ ಗುಂಪುಗಾರಿಕೆ ಮಾಡಿಕೊಂಡಿರುವವರಿಗೆ ಯಾವುದೇ ಅವಕಾಶ ಸಿಗುವುದಿಲ್ಲ. ಪಕ್ಷದ ಪದಾಧಿಕಾರಿಗಳ ಹುದ್ದೆಯಲ್ಲೂ ಮುಂದುವರೆಯಲು ಸಾಧ್ಯವಿಲ್ಲ. ನನ್ನನ್ನೂ ಒಳಗೊಂಡಂತೆ ಎಲ್ಲರೂ ಪಕ್ಷದ ಸಂಘಟನೆಗೆ ಮೊದಲ ಆದ್ಯತೆ ನೀಡಬೇಕು ಎಂದರು.
ಇನ್ನು ಮುಂದೆ ಕಾಂಗ್ರೆಸ್ ಕಚೇರಿಗೆ ಸಚಿವರು ನಿಯಮಿತವಾಗಿ ಭೇಟಿ ನೀಡುತ್ತಿರುತ್ತಾರೆ. ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರು ನೋಂದಣಿ ಮಾಡಿಸಿಕೊಂಡು ಸಚಿವರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ನೀಡಿದವರ ಸಮಸ್ಯೆಗಳಿಗೆ ಪರಿಹಾರ ದೊರೆತಿರುವ ಬಗ್ಗೆ ಜಿಲ್ಲಾಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಗಮನ ಹರಿಸಬೇಕು ಎಂದರು.
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗಲಿದೆ. ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲು ಸ್ಥಳೀಯ ನಾಯಕತ್ವ ಬಹಳ ಮುಖ್ಯ. ಹೀಗಾಗಿ ಪಕ್ಷದ ಪದಾಧಿಕಾರಿಗಳು, ಶಾಸಕರು, ಸಂಸದರು, ಸಚಿವರು ಪರಸ್ಪರ ಅನ್ಯೋನ್ಯತೆಯಿಂದ ಕೆಲಸ ಮಾಡಬೇಕು. ಶಾಸಕರು, ಪಕ್ಷದ ಅಧ್ಯಕ್ಷರು ಸಹಕಾರ ನೀಡುವುದಿಲ್ಲ ಎಂಬ ಆರೋಪ ಮಾಡುತ್ತಿದ್ದಾರೆ. ಇದು ಸರಿಯಲ್ಲ. ವ್ಯಕ್ತಿಗತ ಪ್ರತಿಷ್ಠೆಗಳೇನೇ ಇದ್ದರೂ ಅದನ್ನು ಬದಿಗಿಟ್ಟು ಪಕ್ಷದ ಹಿತದೃಷ್ಟಿಯಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು ಎಂದರು.
ನಿಗಮ ಮಂಡಳಿಗಳಿಗೆ ಬಾಕಿ ಇರುವ ಅಧ್ಯಕ್ಷರ ಹುದ್ದೆಗಳಿಗೆ ಹಾಗೂ ಸದಸ್ಯರ ಸ್ಥಾನಕ್ಕೆ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಿವೆ. ಪಕ್ಷಕ್ಕಾಗಿ ಕೆಲಸ ಮಾಡಿದ ಪ್ರಾಮಾಣಿಕರನ್ನು ಗುರುತಿಸಿ ಅವರಿಗೆ ಅವಕಾಶ ಕಲ್ಪಿಸಲು ಸಹಕಾರ ನೀಡುವಂತೆ ಮನವಿ ಮಾಡಿದರು.



