ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಮಂತ್ರಿಗಳು ಮತ್ತು ಶಾಸಕರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ವರಿಷ್ಠರ ಜೊತೆ ಮಾತುಕತೆ ನಡೆಸಲು ಜನವರಿ 21ರಂದು ದೆಹಲಿಗೆ ತೆರಳುತ್ತಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಸತೀಶ್ ಜಾರಕಿಹೊಳಿ, ಅಧಿಕಾರ ಹಸ್ತಾಂತರ ವಿಚಾರವಾಗಿ ಪಕ್ಷದಲ್ಲಿ ಕೊಂಚಮಟ್ಟಿಗೆ ಗೊಂದಲ ಉಂಟಾಗಿದೆ. ಇದು ಆಡಳಿತ ಯಂತ್ರದ ಮೇಲೂ ಪರಿಣಾಮ ಬೀರಿದ್ದು, ಆದಷ್ಟು ಶೀಘ್ರ ಎಲ್ಲವನ್ನು ಬಗೆಹರಿಸುವಂತೆ ವರಿಷ್ಠರಿಗೆ ಮನವಿ ಮಾಡಲಾಗುವುದು ಎಂದರು.
ತಮ್ಮ ಸೋದರ ರಮೇಶ್ ಜಾರಕಿಹೊಳಿ ಅವರು ತಮ್ಮನ್ನು ಮುಂದಿನ ವರ್ಷ ಮಾಜಿ ಆಗುತ್ತಾರೆ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಮೇಶ್ ಈ ರೀತಿ ಎಲ್ಲಿ ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಕೆಲವೊಮ್ಮೆ ಇಷ್ಟ ಇಲ್ಲದಿದ್ದರೂ ಕೂಡ ಬಲವಂತವಾಗಿ ಮಾತನಾಡಬೇಕಾಗುತ್ತದೆ. ಅವರ ಪಕ್ಷದಿಂದ ಇಂತಹ ಹೇಳಿಕೆ ನೀಡುವಂತೆ ಒತ್ತಡ ಬಂದಿರಬಹುದು. ಅದಕ್ಕಾಗಿ ಹೇಳಿದ್ದಾರೆ ಎಂದರು.
ಬೆಳಗಾವಿ ವಿಚಾರಕ್ಕೆ ಬಂದಾಗ ಸಹಕಾರ ಕ್ಷೇತ್ರದಲ್ಲಿ ಎಲ್ಲಾ ಪಕ್ಷಗಳು ಒಟ್ಟಾಗಿದ್ದೇವೆ. ಆದರೆ ವಿಧಾನಸಭೆ ಚುನಾವಣೆ ಬಂದಾಗ ಪ್ರತ್ಯೇಕ ಅಸ್ತಿತ್ವ ಉಳಿಸಿಕೊಂಡಿದ್ದೇವೆ. ಹೀಗಾಗಿ ನಮಗೆ ಇಷ್ಟ ಇಲ್ಲದಿದ್ದರೂ ಕೂಡ ಪಕ್ಷದ ಸೂಚನೆಯಂತೆ ಕೆಲಸ ಮಾಡಬೇಕಾಗುತ್ತದೆ ಎಂದರು.




