ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ DK Suresh ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುವುದಾದರೆ ಸುರೇಶ್ ಅವರ ಗೆಲುವು ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ನಾಮಪತ್ರ ಸಲ್ಲಿಕೆ ಮುನ್ನ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ. ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಿಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ ಎಂದರು.
ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸ ಶುರು ಮಾಡಿದೆವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ ಎಂದರು.
BJP Karnataka ಸರ್ಕಾರ ಇದ್ದಾಗಲೂ ನೀವು ತೆರಿಗೆ ಕಟ್ಟಿದ್ದೀರಿ. ಆದರೆ ಬಿಜೆಪಿ ನಿಮ್ಮ ತೆರಿಗೆ ಹಣವನ್ನು ನಿಮಗಾಗಿ ಖರ್ಚು ಮಾಡಲಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ ಬೆಲೆಯನ್ನು ವಿಪರೀತ ಹೆಚ್ಚಿಸಿದರು. ಆದರೆ ನಾವು ಪ್ರತೀ ತಿಂಗಳು 4 ರಿಂದ 5 ಸಾವಿರ ರೂಪಾಯಿಯನ್ನು ಪ್ರತಿ ಅರ್ಹ ಕುಟುಂಬಗಳಿಗೆ ನೀಡುತ್ತಿದ್ದೇವೆ. ಕಾಂಗ್ರೆಸ್ ಅಂದರೆ ಬಡವರ, ಮಧ್ಯಮ ವರ್ಗದವರ ಪರವಾಗಿ ಕೆಲಸ ಮಾಡುವ ಪಕ್ಷ ಎಂದರು.
ಈ ಎಲ್ಲಾ ಕಾರಣಗಳಿಂದ ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ? ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ? ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ. ಡಿ.ಕೆ.ಸುರೇಶ್ ಅವರನ್ನು ಜನ ಗೆಲ್ಲಿಸಲು ತೀರ್ಮಾನಿಸಿದ್ದಾರೆ ಎಂದರು.



