ದೆಹಲಿ: ಆಧಾರ್ ಕಾರ್ಡ್ ನೊಂದಿಗೆ ಎಪಿಕ್ (EPIC) ಸಂಖ್ಯೆಯನ್ನು ಕೂಡಲೇ ಜೋಡಣೆ (Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ದೆಹಲಿಯ ನಿರ್ವಚನ ಸದನದಲ್ಲಿ ತಮ್ಮ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರು ಕೇಂದ್ರ ಗೃಹ ಕಾರ್ಯದರ್ಶಿ, ಕಾರ್ಯದರ್ಶಿ ಶಾಸಕಾಂಗ ಇಲಾಖೆ, ಕಾರ್ಯದರ್ಶಿ ಮೇಟಿ ಮತ್ತು ಯುಐಡಿಎಐ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಮತ್ತು ಇಸಿಐನ ತಾಂತ್ರಿಕ ತಜ್ಞರೊಂದಿಗೆ ಮಂಗಳವಾರ ಸಭೆ ನಡೆಸಿ ಚರ್ಚಿಸಿದರು.
ಚುನಾವಣಾ ಆಯೋಗ ಆರ್ಟಿಕಲ್ 326, ಆರ್ಪಿ ಆಕ್ಟ್, 1950 ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳ ಪ್ರಕಾರ ಕ್ರಮ ಕೈಗೊಳ್ಳುತ್ತದೆ. ಯುಐಡಿಎಐ ಮತ್ತು ಇಸಿಐ ಯ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದಿದ್ದಾರೆ.
ಭಾರತದ ಸಂವಿಧಾನದ 326 ನೇ ವಿಧಿಯ ಪ್ರಕಾರ, ಮತದಾನದ ಹಕ್ಕನ್ನು ಭಾರತದ ನಾಗರಿಕರಿಗೆ ಮಾತ್ರ ನೀಡುವುದು, ಆಧಾರ್ ಕಾರ್ಡ್ ವ್ಯಕ್ತಿಯ ಗುರುತನ್ನು ಮಾತ್ರ ಸ್ಥಾಪಿಸುತ್ತದೆ. ಹಾಗಾಗಿ ಎಪಿಕ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದನ್ನು ಸಂವಿಧಾನದ 326 ನೇ ವಿಧಿ, 1950 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 23(4), 23(5) ಮತ್ತು 23(6) ರ ನಿಬಂಧನೆಗಳ ಪ್ರಕಾರ ಕ್ರಮವಹಿಸಲಾಗುವುದು ಎಂದಿದ್ದಾರೆ.
ಅದರಂತೆ, ಯುಐಡಿಎಐ ಮತ್ತು ಇಸಿಐನ ತಾಂತ್ರಿಕ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ತಿಳಿಸಿದ್ದಾರೆ.




