ಬೆಂಗಳೂರು: ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನಾ ಪ್ರಾಧಿಕಾರ ಕಛೇರಿಯಲ್ಲಿ ಅಧ್ಯಕ್ಷರಾಗಿ ರಘುನಂದನ್ ರಾಮಣ್ಣ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ನಂತರ ಮಾತಾಡಿದ ರಘುನಂದನ್ ರಾಮಣ್ಣ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಅಧ್ಯಕ್ಷನಾಗಿ ಸೇವೆ ಮಾಡಲು ಅವಕಾಶ ನೀಡಿದ್ದಾರೆ ಎಂದರು.
ಬೆಂಗಳೂರು ನಗರ – ಮೈಸೂರು ನಗರ ವೇಗವಾಗಿ ಬೆಳೆಯುತ್ತಿರುವ ನಗರಗಳು. ಇದರಲ್ಲಿ ರಾಮನಗರ, ಚನ್ನಪಟ್ಟಣ, ಮಂಡ್ಯ ಜಿಲ್ಲೆಗಳನ್ನು ಕಾರಿಡಾರ್ ವ್ಯಾಪ್ತಿಗೆ ಬರುತ್ತವೆ. ಸಾರ್ವಜನಿಕರ ವಾಹನ ಸಂಚಾರ ಸುಗಮ ವ್ಯಾಪಾರ ವಹಿವಾಟಿಗೆ ಅನುಕೂಲವಾಗಲಿ ಎಂದು ಕಾರಿಡಾರ್ ಹೈಟೆಕ್ ಮಾಡುವ ಪ್ರಯುತ್ನ ಮಾಡಲಾಗಿದೆ. ಕಾರಿಡಾರ್ ಸಮಸ್ಯೆಗಳ ನಿವಾರಣೆಗಾಗಿ ಸರ್ಕಾರದ ಜೊತೆಯಲ್ಲಿ ಕೈಜೋಡಿಸಿ ನಿವಾರಿಸುಲಾಗುವುದು ಎಂದರು.




