ಬೆಂಗಳೂರು: ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ರಾಹುಲ್ ಗಾಂಧಿ ಇಂದು ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡುವ ರಾಹುಲ್ಗಾಂಲಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.
ಈ ಹಿಂದೆ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ರಾಹುಲ್ ಗಾಂಧಿ ಹಲವು ಬಾರಿ ರಾಜ್ಯಪ್ರವಾಸ ಕೈಗೊಂಡಿದ್ದರು. ಅದಕ್ಕೂ ಮೊದಲು ಭಾರತ್ ಜೋಡೊ ಯಾತ್ರೆ ಮೂಲಕ ರಾಜ್ಯದ ಚಾಮರಾಜನಗರ, ಮೈಸೂರು, ತುಮಕೂರು, ಬಳ್ಳಾರಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಸ ನಡೆಸಿದರು.
ಈ ನಡುವೆ ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದರಾದರೂ ಗಮನ ಸೆಳೆಯುವಂಥ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿಲ್ಲ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರ ಪ್ರವಾಸ ಕಾಂಗ್ರೆಸ್ ನ ಉತ್ಸಾಹವನ್ನು ಹೆಚ್ಚಿಸಿದೆ.




