ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ ಎಂದರು.
ಲೋಕಸಭೆಯಲ್ಲಿ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ರಾಹುಲ್ ಗಾಂಧಿಯವರಿಗೆ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂದು ಕಾರ್ಯಕಾರಿಣಿ ಸಮಿತಿ ಹಾಗೂ ನಾನೂ ಒತ್ತಾಯ ಮಾಡಿದ್ದೆ ಎಂದರು.
ರಾಹುಲ್ ಗಾಂಧಿ ಈ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ನಾನು ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ತಿಳಿಸಬಯಸುತ್ತೇನೆ ಎಂದರು.
ರಾಜ್ಯದಲ್ಲಿ ಹಾಲಿನ ಉತ್ಪಾದನೆ 99 ಲಕ್ಷ ಲೀಟರ್ ಗಿಂತ ಹೆಚ್ಚಾಗಿದೆ. ಕಳೆದ ವರ್ಷ ಇದೇ ವೇಳೆಗೆ ಹಾಲಿನ ಉತ್ಪಾದನೆ 90 ಲಕ್ಷ ಲೀಟರ್ ಇತ್ತು. ಈಗ 99 ಲಕ್ಷಕ್ಕಿಂತ ಹೆಚ್ಚಾಗಿದೆ. ರೈತರಿಂದ ನಾವು ಹಾಲು ಪಡೆಯಬೇಕಾಗಿದ್ದು, ಅದನ್ನು ಮಾರಾಟ ಮಾಡಬೇಕಿದೆ ಎಂದರು.
ಈ ಹಿನ್ನೆಲೆಯಲ್ಲಿ ಅರ್ಧ ಲೀಟರ್ ಪ್ಯಾಕೆಟ್ ನಲ್ಲಿ 50 ಮೀ.ಲೀ ಹೆಚ್ಚು ಮಾಡಿದ್ದು, ಅದಕ್ಕೆ ತಗುಲುವ 2.10 ರೂ.ಗಳನ್ನು ಅದರ ಪ್ರಮಾಣಕ್ಕೆ ತಕ್ಕಂತೆ ಬೆಲೆ ನಿಗದಿ ಮಾಡಲಾಗಿದೆ.ದರ ಹೆಚ್ಚಳ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.





2 Responses
ಡಾ //ಮಲ್ಲಿಕಾರ್ಜುನ ಖರ್ಗೆ ಯವರಷ್ಟು ಅನುಭವ ನಿಮಗೆ ಇದ್ದಿದ್ರೆ ಈ ಮಾತು ಬರ್ತಾ ಇರಲಿಲ್ಲ, ಇದರಿಂದಲೇ ಗೊತ್ತಾಗುತ್ತೆ ನಿಮ್ಮ ಜಾತಿವಾದಿತನ, ಇಲ್ಲಿ CM ಆಗೋಕೆ ಬಿಡಲಿಲ್ಲ, ಅಲ್ಲಿ PM ಆಗೋಗ್ತಾರೆ ಅಂತ ಎಷ್ಟೊಂದು ಹೊಟ್ಟೆ ಹುರಿ, ಅಹಿಂದ ಹೆಸರಲ್ಲಿ CM ಆಗಿ ಇನ್ನೂ ಜಾತಿವಾದಿತನ ಬಿಟ್ಟಿಲ್ಲ
ಈವಾಗಲೂ ಮೋದಿ ಭಯ ಪಡ್ತಾ ಇರೋದು ಖರ್ಗೆ ಯವರಿಗೆ ಮಾತ್ರ, ಉತ್ತರ ಕೊಡೋಕೆ ಆಗ್ತಾ ಇಲ್ಲ ಚರ್ಚೆ ಮಾಡೋಕೆ ಬರ್ತಾ ಇಲ್ಲ, One should know this fact