ಬೆಂಗಳೂರು: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ. ಚುನಾವಣಾ ಆಯೋಗ ಮತದಾರರ ಪಟ್ಟಿಯಿಂದ ಅರ್ಹ ಮತದಾರರನ್ನು ಕೈಬಿಟ್ಟು ಬಿಜೆಪಿಗೆ ಅನುಕೂಲಕರವಾಗುವ ರೀತಿಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಇದರ ವಿರುದ್ಧ ಬೆಂಗಳೂರಿನಿಂದ ಪ್ರತಿಭಟನೆ ಆರಂಭಿಸುತ್ತಿದ್ದಾರೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಚುನಾವಣೆ ಆಯೋಗದ ಕರಿನೆರಳಿನಲ್ಲಿ ಇಂತಹ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸುತ್ತಿರುವ ಅವರು ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಈ ಅಕ್ರಮ ನಡೆದಿದೆ. ಈ ಬಗ್ಗೆ ಹಲವು ದಾಖಲೆಗಳು ಇವೆ ಎಂದಿದ್ದಾರೆ. ಇದೀಗ ಆ ದಾಖಲೆಗಳೊಂದಿಗೆ ಆಗಸ್ಟ್ ನಾಲ್ಕರಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹಾದೇವಪುರ ವಿಧಾನಸಭೆ ಕ್ಷೇತ್ರದಿಂದ ಹೋರಾಟ ಮಾಡಲು ತೀರ್ಮಾನಿಸಿದ್ದಾರೆ.
ಚುನಾವಣಾ ಅಕ್ರಮದ ಆಪಾದನೆಯನ್ನು ಚುನಾವಣಾ ಆಯೋಗ ಸ್ಪಷ್ಟವಾಗಿ ನಿರಾಕರಣೆ ಮಾಡಿರುವುದರ ನಡುವೆಯೂ ಹೋರಾಟವನ್ನು ಕಾಂಗ್ರೆಸ್ ಕೈಗೆತ್ತಿಕೊಂಡಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತ ಚಲಾಯಿಸಿದವರು ನಂತರದ ಹಂತದಲ್ಲಿ ನೆರೆ ರಾಜ್ಯದಲ್ಲಿ ನಡೆದ ಮತದಾನದಲ್ಲಿ ಭಾಗವಹಿಸಿದ್ದಾರೆ ಎಂಬುದಕ್ಕೆ ದಾಖಲೆ ಸಿಕ್ಕಿದೆ. ಜತೆಗೆ ನಿರ್ದಿಷ್ಟ ಸಮುದಾಯದ ಮತದಾರರ ಹೆಸರು ಕೈಬಿಟ್ಟಿರುವ ಬಗ್ಗೆಯೂ ದಾಖಲೆಗಳನ್ನು ಸಂಗ್ರಹ ಮಾಡಲಾಗಿದೆ. ಈ ಆಧಾರದ ಮೇಲೆಯೇ ಹೋರಾಟಕ್ಕೆ ರಾಹುಲ್ ಗಾಂಧಿ ನಿರ್ಣಯ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಆಗಸ್ಟ್ ನಾಲ್ಕರಂದು ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ವಿವರ ಬಹಿರಂಗಪಡಿಸಲಿರುವ ರಾಹುಲ್ ಗಾಂಧಿ, ಆ ನಂತರ ರಾಜ್ಯ ಕಾಂಗ್ರೆಸ್ ನಾಯಕನೊಂದಿಗೆ ಬೆಂಗಳೂರಿನಲ್ಲಿರುವ ಕೇಂದ್ರ ಚುನಾವಣಾ ಆಯುಕ್ತರ ಕಚೇರಿಗೆ ಭೇಟಿ ನೀಡಿ ದೂರು ನೀಡಲಿದ್ದಾರೆ.
ಚುನಾವಣಾ ಅಕ್ರಮ ಕುರಿತು ದೇಶದ ಗಮನ ಸೆಳೆಯುವ ದೃಷ್ಟಿಯಿಂದ ದಾಖಲೆಗಳೊಂದಿಗೆ ರಾಹುಲ್ ಗಾಂಧಿ ಅವರು ಬೆಂಗಳೂರಿನ ಮಹದೇವಪುರದಿಂದ ಚುನಾವಣಾ ಆಯೋಗದ ಕಚೇರಿವರೆಗೆ ಪಾದಯಾತ್ರೆ ಮಾಡಲು ತೀರ್ಮಾನ ಮಾಡಿದ್ದರು. ಆದರೆ ಭದ್ರತೆ ಸೇರಿದಂತೆ ಹಲವು ಕಾರಣಗಳಿಂದ ಪಾದಯಾತ್ರೆ ಬೇಡ ಎಂದು ರಾಜ್ಯ ಕಾಂಗ್ರೆಸ್ ಸಲಹೆ ನೀಡಿದೆ.
ರಾಹುಲ್ ಗಾಂಧಿ ಅವರ ಹೋರಾಟದ ಹಿನ್ನೆಲೆಯಲ್ಲಿ ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಪಕ್ಷದ ಮುಖಂಡರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಪಾದಯಾತ್ರೆ ನಡೆಸಲು ಹೈಕೋರ್ಟ್ ನೀಡಿರುವ ತೀರ್ಪು ಮತ್ತು ಪೊಲೀಸರ ವರದಿಯನ್ನು ಅವಲೋಕಿಸಲಾಯಿತು. ಅಂತಿಮವಾಗಿ ಪಾದಯಾತ್ರೆಯ ಬದಲಿಗೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಸಭೆ ನಡೆಸಲು ನಿರ್ಧರಿಸಲಾಯಿತು. ಬಳಿಕ ಅಗತ್ಯ ದಾಖಲೆಗಳೊಂದಿಗೆ ಚುನಾವಣಾ ಆಯೋಗಕ್ಕೆ ದೂರು ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.


