ಸೆ. 11ರವರೆಗೆ ಗುಡುಗು ಸಹಿತ ಮಳೆ ನಿರೀಕ್ಷೆ

4 years ago

ಬೆಂಗಳೂರು : ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಭಾಗದಲ್ಲೂ ಸೆಪ್ಟೆಂಬರ್‌ 11ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಮಲೆನಾಡು ಭಾಗಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಇಂದಿನಿಂದ ಕರಾವಳಿಯ 3 ಜಿಲ್ಲೆಗಳು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

Leave a Reply