ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ, ಉತ್ತರಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವರುಣನ ಆರ್ಭಟ ಮುಂದುವರೆದಿದೆ ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಭದ್ರಾ, ನೇತ್ರಾವತಿ, ಶರಾವತಿ ಕುಮುದ್ವತಿ, ತುಂಗಾ, ಹಾರಂಗಿ, ಕಾವೇರಿ, ಕಪಿಲಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನದಿ ಪಾತ್ರದ ಜನರನ್ನು ಮುಂಜಾಗ್ರತೆ ದೃಷ್ಟಿಯಿಂದ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.
ಈ ನಡುವೆ, ಮಳೆಯಿಂದಾಗಿ ಅತಿಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಯ ಆಯ್ದ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿನೀಡಿ, ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲು ಆಲಿಸಲಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳ ಜನರ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗೆ ರಾಜ್ಯ ಸರ್ಕಾರವು ಈಗಾಗಲೇ ರೂ.775 ಕೋಟಿ ಹಣ ನೀಡಿದ್ದು, ಅಗತ್ಯವಿದ್ದರೆ ಇನ್ನೂ ಹೆಚ್ಚಿನ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಧಾರಾಕಾರ ಮಳೆಗೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಹೊಲ-ಗದ್ದೆಗಳು ಜಲಾವೃತಗೊಂಡಿವೆ. ಮತ್ತೆ ಕೆಲವೆಡೆ ಮನೆಗಳು ಕುಸಿದು ಸಾವು-ನೋವುಗಳು ಸಂಭವಿಸಿವೆ. ಕರಾವಳಿ ಭಾಗದಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಶಿರಾಡಿಘಾಟ್ನರಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಸಕಲೇಶಪುರ ದೊಡ್ಡತೋಪು ಬಳಿ ರಸ್ತೆಗೆ ಮಣ್ಣು ಕುಸಿದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಂಚಾರಕ್ಕೆ ಅಡಚಣೆಯಾಗಿದೆ. ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿದು ಶೃಂಗೇರಿ ತಾಲ್ಲೂಕು ನೆಮ್ಮಾರಮಕ್ಕಿ ಬಳಿ ವಾಹನ ಸಂಚಾರಕ್ಕೆ ಅಡಚಣೆಯಾಗಿ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಮುಂಜಾಗ್ರತಾ ಕ್ರಮವಾಗಿ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಸಂಚಾರ ನಿರ್ಬಂಧಿಸಲಾಗಿದೆ. ಧಾರ್ಮಿಕ ಕ್ಷೇತ್ರ ನಂಜುಂಡೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಬಳಿ ಕುಸಿದಿದ್ದ ಗುಡ್ಡ ತೆರವು ಕಾರ್ಯಚರಣೆ ಮುಂದುವರೆದಿದೆ. ಮಣ್ಣಿನಡಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯಲು ಐದು ದಿನಗಳಿಂದ NDRF ಪಡೆ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಹತ್ತು ಮಂದಿ ಮಣ್ಣಿನಡಿ ಸಿಲುಕಿದ್ದು, ಏಳು ಮೃತದೇಹಗಳನ್ನು ಈಗಾಗಲೇ ಹೊರತೆಗೆಯಲಾಗಿದೆ.
ಬೆಳಗಾವಿ ಜಿಲ್ಲೆ ಖಾನಾಪುರ, ಮಹಾರಾಷ್ಟ್ರದ ಸಾವಂತವಾಡಿ ತಾಲ್ಲೂಕಿನ ಹಲವು ಸೇತುವೆಗಳು ಭಾರೀ ಮಳೆಗೆ ಮುಳುಗಡೆಯಾಗಿವೆ. ಕಾಡಂಚಿನ 30ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ.
ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಿಂದ 24 ಮನೆಗಳು ಸಂಪೂರ್ಣ ಕುಸಿದು ಹೋಗಿದ್ದು, 74 ಮನೆಗಳು ಭಾಗಶಃ ಕುಸಿದಿವೆ. ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ, ಅಘನಾಶಿನಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಚಾರ್ಮಾಡಿ ರಸ್ತೆಯಲ್ಲಿ ಭೂಕುಸಿತ ಸಾಧ್ಯತೆ ಇರುವ ಕಾರಣ ರಸ್ತೆಯನ್ನು ಮುಚ್ಚಲಾಗಿದೆ.
ಉಡುಪಿ ಜಿಲ್ಲೆಯ ಸೌಪರ್ಣಿಕಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, 86 ಗ್ರಾಮಗಳ ನಿವಾಸಿಗಳನ್ನು ಆರೋಗ್ಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಶಿವಮೊಗ್ಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.



